ಎನ್‌ಎಂಪಿಎ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

| Published : Aug 16 2024, 12:47 AM IST

ಸಾರಾಂಶ

ನವ ಮಂಗಳೂರು ಬಂದರು ಪ್ರಾಧಿಕಾರದ ಸಹಯೋಗದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನುಗುರುವಾರ ದೇಶಭಕ್ತಿ ಮತ್ತು ರಾಷ್ಟ್ರೀಯ ಪ್ರಗತಿಯ ಬದ್ಧತೆಯೊಂದಿಗೆ ಆಚರಿಸಿತು. ಎನ್‌ಎಂಪಿಎ ಅಧ್ಯಕ್ಷ ಡಾ.ಎ.ವಿ. ರಮಣ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ನವ ಮಂಗಳೂರು ಬಂದರು ಪ್ರಾಧಿಕಾರದ ಸಹಯೋಗದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನುಗುರುವಾರ ದೇಶಭಕ್ತಿ ಮತ್ತು ರಾಷ್ಟ್ರೀಯ ಪ್ರಗತಿಯ ಬದ್ಧತೆಯೊಂದಿಗೆ ಆಚರಿಸಿತು. ಎನ್‌ಎಂಪಿಎ ಅಧ್ಯಕ್ಷ ಡಾ.ಎ.ವಿ. ರಮಣ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದ ಯುವಕರ ಸಾಮರ್ಥ್ಯ ಮತ್ತು ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಣ ನಿರ್ಣಾಯಕ ಪಾತ್ರ ವಹಿಸಿದೆ. ಯುವ ಮನಸ್ಸುಗಳಿಗೆ ಮಾರ್ಗದರ್ಶನ ನೀಡುವಲ್ಲಿ ಮತ್ತು ನೈತಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಬೆಳೆಸುವ ಮಹತ್ವ ಜವಾಬ್ದಾರಿ ಇದೆ ಎಂದರು.

ಕಳೆದ 10 ವರ್ಷಗಳಲ್ಲಿ ಬಂದರು ವಲಯದಲ್ಲಿ ಸಾಮರ್ಥ್ಯ ಮತ್ತು ಸರಕು ನಿರ್ವಹಣೆಯಲ್ಲಿನ ಬೆಳವಣಿಗೆ ಹೆಚ್ಚಳವಾಗಿದೆ ಎಂದರು.ಧ್ವಜಾರೋಹಣದ ನಂತರ ಸಿಐಎಸ್‌ಎಫ್ ಸಿಬ್ಬಂದಿ, ಎನ್‌ಎಂಪಿಎ ಅಗ್ನಿಶಾಮಕ ದಳದ ಸಿಬ್ಬಂದಿ, ಎನ್‌ಎಂಪಿಟಿ ಶಾಲೆ, ಕೇಂದ್ರೀಯ ವಿದ್ಯಾಲಯ ಶಾಲೆ ಮತ್ತು ಖಾಸಗಿ ಭದ್ರತಾ ಸಿಬ್ಬಂದಿ ಒಳಗೊಂಡ ಮೆರವಣಿಗೆ ನಡೆಯಿತು.

ಈ ಸಂದರ್ಭ ಎನ್‌ಎಂಪಿಟಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳು ಮತ್ತು ಕೇಂದ್ರೀಯ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎನ್‌ಎಂಪಿಟಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ, ಕೆವಿ ನಂ.1 ರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಬಂದರು ಕಾಲನಿಯ ನಂದನೇಶ್ವರ ಉದ್ಯಾನವನದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಾಂಕೇತಿಕ ಕಾರ್ಯಕ್ರಮ ನಡೆಯಿತು.