ಸಾರಾಂಶ
ಪೊಲಿಪು ಗ್ರಾಮದಲ್ಲಿ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ೨೦೨೪-೨೫ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಆಯೋಜಿಸಿತ್ತು.
ಕನ್ನಡಪ್ರಭ ವಾರ್ತೆ ಕಾಪು
ಯುವಕರು ಸಮರ್ಪಣ ಭಾವದಿಂದ ನಿಸ್ವಾರ್ಥ ಸೇವೆ ಮಾಡಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಕಾಪು ಪುರಸಭೆ ಅಧ್ಯಕೆ ಹರಿಣಾಕ್ಷಿ ತಿಳಿಸಿದರು.ಅವರು ಇಲ್ಲಿನ ಪೊಲಿಪು ಗ್ರಾಮದಲ್ಲಿ ವೈಕುಂಠ ಬಾಳಿಗ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಯೋಜಿಸಿದ್ದ ೨೦೨೪-೨೫ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ನಿರ್ದೇಶಕಿ ಡಾ. ನಿರ್ಮಲಾ ಕುಮಾರಿ ಕೆ. ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಸೇವೆಯನ್ನು ಮಾಡುವುದು ಅತೀ ಮುಖ್ಯವಾಗಿದ್ದು, ಯುವಕರೇ ದೇಶ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷೆ ವಿನುತಾ ಕಿರಣ್ ಹರೀಶ್, ಶಾಲೆಯ ಮುಖ್ಯೋಪಾಧ್ಯಾಯಿನಿ ಗಾಯಿತ್ರಿ, ಮೊಗವೀರ ಮಹಿಳಾ ಮಂಡಳಿ ಅಧ್ಯಕ್ಷೆ ಕವಿತಾ ಮಾತನಾಡಿದರು.ಶಾಲಾ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶೋಭಾ ಶೆಟ್ಟಿ ಹಾಜರಿದ್ದರು. ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಸಿ.ಬಿ. ನವೀನ್ ಚಂದ್ರ ಸ್ವಾಗತಿಸಿದರು. ಎನ್‌ಎಸ್‌ಎಸ್ ಕಾರ್ಯದರ್ಶಿ ಅಶೋಕ ಆರ್. ವಂದಿಸಿದರು. ಚಂದ್ರಿಕಾ ನಿರೂಪಿಸಿದರು. ಮತ್ತೋರ್ವ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಅಮೋಘ ಗಾಡ್ಕರ್ ಹಾಗೂ ಕಾರ್ಯದರ್ಶಿ ನಂದನ್ ರೈಮಂಡ್ ಮಚ್ಚಾದು ಉಪಸ್ಥಿತರಿದ್ದರು.