ಸಾರಾಂಶ
ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದಕ್ಕೆ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕೆಲವು ಕಾರ್ಯಕರ್ತರನ್ನು ಉಚ್ಛಾಟಿಸಿದ್ದಾರೆ. ಆದರೆ, ಬಿಜೆಪಿ ಭದ್ರಕೋಟೆಯಾಗಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ಈವರೆಗೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ದೂಡಾ ಮಾಜಿ ಅಧ್ಯಕ್ಷ, ಹಿರಿಯ ವಕೀಲ ಎ.ವೈ. ಪ್ರಕಾಶ ಪಕ್ಷದ ವರಿಷ್ಠರಿಗೆ ಪ್ರಶ್ನಿಸಿದ್ದಾರೆ.
ಕನ್ನಡಪ್ರಭ ವಾರ್ತೆ ದಾವಣಗೆರೆ
ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದಕ್ಕೆ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕೆಲವು ಕಾರ್ಯಕರ್ತರನ್ನು ಉಚ್ಛಾಟಿಸಿದ್ದಾರೆ. ಆದರೆ, ಬಿಜೆಪಿ ಭದ್ರಕೋಟೆಯಾಗಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ಈವರೆಗೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ದೂಡಾ ಮಾಜಿ ಅಧ್ಯಕ್ಷ, ಹಿರಿಯ ವಕೀಲ ಎ.ವೈ. ಪ್ರಕಾಶ ಪಕ್ಷದ ವರಿಷ್ಠರಿಗೆ ಪ್ರಶ್ನಿಸಿದ್ದಾರೆ.ಶಿಸ್ತು ಕ್ರಮ ಜಾರಿಯಲ್ಲಿ ಶಿಗ್ಗಾಂವಿಗೊಂದು ನೀತಿ, ದಾವಣಗೆರೆ ಜಿಲ್ಲೆಗೊಂದು ರೀತಿ ಎಷ್ಟರಮಟ್ಟಿಗೆ ಸರಿ? ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೆಲವರು ಎದುರಾಳಿಗಳೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರಿಂದಲೇ ಪಕ್ಷಕ್ಕೆ ಸೋಲಾಗಿದೆ. ಯಾರು ಯಾರ ಜೊತೆಗೆ, ಯಾವ ರೀತಿಯ ಹೊಂದಾಣಿಕೆ ಮಾಡಿಕೊಂಡಿದ್ದಾರೆಂಬುದು ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜಕೀಯ ಬಲ್ಲ, ರಾಜಕೀಯದ ಆಳ, ಅಗಲ ತಿಳಿದಿರುವ ಪಕ್ಷಗಳ ಕಾರ್ಯಕರ್ತರೇ ಮುಕ್ತವಾಗಿ ಮಾತನಾಡುತ್ತಿದ್ದಾರೆ. ಬಿಜೆಪಿ ರಾಜ್ಯ ನಾಯಕರು ಯಾಕೆ ಕ್ರಮ ಕೈಗೊಂಡಿಲ್ಲ ಎಂಬುದೇ ಹಲವು ಪ್ರಶ್ನೆಗೆ ಕಾರಣವಾಗಿದೆ ಎಂದಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರ ಸೋಲಿಗೆ ಕಾರಣರಾದ ಜಿಲ್ಲೆಯ ಎಲ್ಲ ಕ್ಷೇತ್ರಗಳ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ, ಪಕ್ಷದ ಸೋಲಿಗೆ ಕಾರಣರಾದ ವ್ಯಕ್ತಿಗಳನ್ನು ಮೊದಲು ಪಕ್ಷದಿಂದ ಉಚ್ಛಾಟಿಸುವ ಕೆಲಸ ಆಗಬೇಕು. ಅಂದಿನ ಸೋಲಿಗೆ ಕಾರಣರಾದವರೇ ಈಗ ಪಕ್ಷ ಸಂಘಟನೆಗೆ ಕಾರ್ಯಕರ್ತರಿಗೆ ಕರೆ ನೀಡುತ್ತಿರುವುದು ವಿಪರ್ಯಾಸದ ಸಂಗತಿ ಎಂದು ಪ್ರಕಾಶ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.- - - -40ಕೆಡಿವಿಜಿ7: ಎ.ವೈ.ಪ್ರಕಾಶ