ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ ಕೇವಲ ಗ್ಯಾರಂಟಿ ವಿಚಾರ ಹೇಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಸರಿಯಾಗಿ ಜಾರಿ ಮಾಡದೇ ದಲಿತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದರು.
ನ್ನಡಪ್ರಭ ವಾರ್ತೆ ಶಿರಾ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ ಕೇವಲ ಗ್ಯಾರಂಟಿ ವಿಚಾರ ಹೇಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಸರಿಯಾಗಿ ಜಾರಿ ಮಾಡದೇ ದಲಿತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದರು. ಅವರು ಈ ಬಗ್ಗೆ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಭಾರತ ಶೇ. ೮೦ರಷ್ಟು ಬಂಗಾರ ಆಮದು ಮಾಡಿಕೊಳ್ಳುತ್ತಿದ್ದೇವೆ. ಈ ಹಿಂದೆ ೧೯೬೪-೬೫ ರಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಆಹಾರದ ಸಮಸ್ಯೆ ಉಂಟಾದಾಗ ವಾರದಲ್ಲಿ ಒಂದು ದಿನ ಊಟ ಬಿಡುವಂತೆ ಕರೆ ಕೊಟ್ಟಿದರು. ಅಂದು ಜನತೆ ಅದನ್ನು ಪಾಲಿಸಿದರು. ಹಿಂದೆ ಕಾಂಗ್ರೆಸ್ ಸರ್ಕಾರ ಬಂಗಾರ ಖರೀದಿ ಮಾಡಬೇಡಿ ಎಂದು ಕರೆ ಕೊಟ್ಟಿದ್ದಾರೆ. ಮೋದಿಯವರು ಹೇಳಿದ್ದನ್ನು ಜನರ ಮುಂದೆ ತಪ್ಪಾಗಿ ಬಿಂಬಿಸಿರುವುದನ್ನು ಖಂಡಿಸುತ್ತೇನೆ ಎಂದರು. ಜನಸಂಖ್ಯೆಗೆ ಅನುಗುಣವಾಗಿ ಬಿಜೆಪಿ ಸರ್ಕಾರದಲ್ಲಿ ಮೀಸಲಾತಿ ಹೆಚ್ಚಿಸಲಾಗಿತ್ತು. ಅದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಆದರೆ ಸಿದ್ದರಾಮಯ್ಯ ಅವರು ಮೀಸಲಾತಿ ಹೆಚ್ಚಳದ ಬಗ್ಗೆ ಕೋರ್ಟ್ ನಲ್ಲಿ ಕೇಸ್ ಹಾಕಿಸಿ ಅದಕ್ಕೆ ಸರ್ಕಾರದಿಂದ ವಾದ ಮಾಡದೆ ಮೊದಲಿದ್ದಂತೆ ಮೀಸಲಾತಿ ಆಗಲು ಕಾರಣರಾಗಿದ್ದಾರೆ. ಕಾಂಗ್ರೆಸ್ ನವರು ಯಾವತ್ತೂ ದಲಿತರ ಪರ ಇಲ್ಲ. ಬಿಜೆಪಿ ಸರ್ಕಾರ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಮೀಸಲಾತಿ ಮಾಡಿದೆ. ಆದರೆ ಕಾಂಗ್ರೆಸ್ ಸರ್ಕಾರ ಎಸ್ ಸಿ ಮೀಸಲಾತಿ ಗೊಂದಲ ಸೃಷ್ಟಿ ಮಾಡಿದೆ. ಸದಾಶಿವ ಆಯೋಗ, ನಾಗಮೋಹನ್ ದಾಸ್, ಮಾಧುಸ್ವಾಮಿಯವರ ಶಿಫಾರಸ್ಸು ಯಾವುದನ್ನು ಪರಿಗಣಿಸದೆ ಕೇವಲ ಅಣ್ಣತಮ್ಮಂದಿರು ಆಸ್ತಿ ಭಾಗ ಮಾಡಿಕೊಂಡಂತೆ ಮೀಸಲಾತಿ ಹಂಚಿಕೆ ಮಾಡಿದ್ದಾರೆ. ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಮೀಸಲಾತಿ ವರ್ಗೀಕರಣ ಆಗಿಲ್ಲ ಎಂದರು. ಬಾಕ್ಸ್ಯುದ್ಧದಿಂದ ಡಾಲರ್ ಮೌಲ್ಯ ಹೆಚ್ಚಾಗಿದೆ ಪೆಟ್ರೋಲ್, ಡೀಸೆಲ್, ಎಲ್ಪಿಜಿ ಸಮಸ್ಯೆ ಉಂಟಾಗಿದೆ ಆದರೂ ಇದುವರೆಗೂ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರ ಜನಸಾಮಾನ್ಯರಿಗೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಿದೆ. ಮುಂದಿನ ದಿನಗಳಲ್ಲಿ ತೀವ್ರ ತೊಂದರೆಯಾಗುವುದನ್ನು ತಡೆಯಲು ಮೋದಿಯವರು ಕರೆ ಕೊಟ್ಟಿದ್ದಾರೆ. ಒಂದು ವರ್ಷದವರೆಗೆ ಪೆಟ್ರೋಲ್ ಕಡಿಮೆ ಬಳಸಿ ಬಂಗಾರ ಖರೀದಿ ಮಾಡಬೇಡಿ ಎಂದು ಹೇಳಿದ್ದಾರೆ. ಆದರೆ ಲಜ್ಜಗೆಟ್ಟ ಕಾಂಗ್ರೆಸ್ ನವರು ಈ ಬಗ್ಗೆ ಆಪ ಪ್ರಚಾರ ಮಾಡುತ್ತಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ, ಮಧುಗಿರಿ ವಿಭಾಗದ ಜಿಲ್ಲಾ ಬಿಜೆಪಿ ಅಧ್ಯಕ್ಷೆ ಉಮಾ ವಿಜಯರಾಜ್, ದಿಶಾ ಸಮಿತಿ ಸದಸ್ಯ ಮದಲೂರು ಮೂರ್ತಿ ಮಾಸ್ಟರ್, ಮಾಜಿ ಗ್ರಾ.ಪಂ. ಸದಸ್ಯರಾದ ಶಿವು ಸ್ನೇಯಪ್ರಿಯ, ಉಮೇಶ್, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಅಜ್ಜಣ್ಣ, ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ತೇಜೇಶ್ವರ್, ಕೋಟೆ ರವಿ, ಭೂವನಹಳ್ಳಿ ಲಿಂಗರಾಜು ಸೇರಿದಂತೆ ಹಲವರು ಹಾಜರಿದ್ದರು. .