ಸಾರಾಂಶ
ಈಗಾಗಲೇ ಮುಡಾ ಹಗರಣ ವಿರೋಧಿಸಿ ಮೈಸೂರು ಭಾಗದಲ್ಲಿ ಪಾದಯಾತ್ರೆ ಮಾಡಲಾಗಿದೆ. ವಾಲ್ಮೀಕಿ ಹಗರಣ ವಿರೋಧಿಸಿ ಉತ್ತರ ಕರ್ನಾಟಕ ಭಾಗದಲ್ಲಿ ಪಾದಯಾತ್ರೆ ಮಾಡಲು ಸಮಾಲೋಚನೆ ನಡೆಸಿದ್ದಾರೆ. ಈ ಬಗ್ಗೆ ಕೇಂದ್ರದ ನಾಯಕರಿಗೆ ಸದ್ದುದ್ದೇಶದಿಂದ ಮನವರಿಕೆ ಮಾಡುತ್ತಿದ್ದಾರೆ ಎಂದು ಮಹೇಶ ಟೆಂಗಿನಕಾಯಿ ಹೇಳಿದರು.
ಹುಬ್ಬಳ್ಳಿ:
ಶಾಸಕರಾದ ಬಸವನಗೌಡ ಯತ್ನಾಳ ಹಾಗೂ ರಮೇಶ ಜಾರಕಿಹೊಳಿ ಪಕ್ಷದ ಬಲವರ್ಧನೆಗಾಗಿ ಸಭೆ ನಡೆಸಿ ಚಿಂತನೆ ಮಾಡಿದ್ದಾರೆಯೇ ಹೊರತು, ಯಾವುದೇ ಭಿನ್ನಮತದಿಂದ ಅಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ಸಮಾಲೋಚನೆ ಕದ್ದುಮುಚ್ಚಿ ಮಾಡಿಲ್ಲ. ಅಷ್ಟೇ ಅಲ್ಲದೇ ಅವರು ಪಕ್ಷದ ತೀರ್ಮಾನಕ್ಕೆ ಬದ್ಧವಿರುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದರು.
ಈಗಾಗಲೇ ಮುಡಾ ಹಗರಣ ವಿರೋಧಿಸಿ ಮೈಸೂರು ಭಾಗದಲ್ಲಿ ಪಾದಯಾತ್ರೆ ಮಾಡಲಾಗಿದೆ. ವಾಲ್ಮೀಕಿ ಹಗರಣ ವಿರೋಧಿಸಿ ಉತ್ತರ ಕರ್ನಾಟಕ ಭಾಗದಲ್ಲಿ ಪಾದಯಾತ್ರೆ ಮಾಡಲು ಸಮಾಲೋಚನೆ ನಡೆಸಿದ್ದಾರೆ. ಈ ಬಗ್ಗೆ ಕೇಂದ್ರದ ನಾಯಕರಿಗೆ ಸದ್ದುದ್ದೇಶದಿಂದ ಮನವರಿಕೆ ಮಾಡುತ್ತಿದ್ದಾರೆ. ಪಕ್ಷ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ. ಅದಕ್ಕೆ ಅವರು ಸಹ ಬದ್ಧರಾಗಿರುತ್ತಾರೆ ಎಂದು ತಿಳಿಸಿದರು.ರಾಜ್ಯಾಧ್ಯಕ್ಷರು, ರಾಜ್ಯ ಉಸ್ತುವಾರಿಗಳಿಗೆ ಈ ಬಗ್ಗೆ ಗಮನಕ್ಕೆ ಬಂದಿದೆ. ಪಕ್ಷ ನಿರ್ಧಾರ ಕೈಗೊಂಡರೆ ಎಲ್ಲರೂ ಪಾಲಿಸಬೇಕಾಗುತ್ತದೆ. ಹೈಕಮಾಂಡ್ ನಿರ್ಧಾರ ಅಂತಿಮ ಎಂದು ಹೇಳಿದರು.
ರಾಜ್ಯ ಸರ್ಕಾರದಿಂದ ಅನುದಾನ ಪಡೆಯಲು ಹರಸಾಹಸ ಪಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಅನುದಾನ ಪಡೆಯಲು ಪ್ರಯತ್ನಿಸಲಾಗುತ್ತಿದೆ. ಹುಬ್ಬಳ್ಳಿಯನ್ನು ಸ್ವಚ್ಛ ಹಾಗೂ ಸುಂದರ ನಗರವಾಗಿಸುವ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.