ಕಾನೂನಿನ ಅಜ್ಞಾನಕ್ಕೆ ಕ್ಷಮೆ ಇಲ್ಲ: ನ್ಯಾ. ಶುಭಾ

| Published : Nov 13 2024, 12:06 AM IST

ಸಾರಾಂಶ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆಶ್ರಯದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕಾನೂನಿನ ಅಜ್ಞಾನಕ್ಕೆ ಕ್ಷಮೆ ಇಲ್ಲ. ಆದ್ದರಿಂದ ಕಾನೂನಿನ ಜ್ಞಾನ ಎಲ್ಲರಿಗೂ ಅವಶ್ಯಕ. ಹೆಣ್ಣು ಮಕ್ಕಳು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು. ಶಿಕ್ಷಣದೊಂದಿಗೆ ಮಾನವೀಯ ಮೌಲ್ಯ ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭಾ ತಿಳಿಸಿದ್ದಾರೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆಶ್ರಯದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನು ಸೇವಾ ಪ್ರಾಧಿಕಾರ ಪ್ರತಿಯೊಬ್ಬರಿಗೂ ಎಲ್ಲಾ ರೀತಿಯ ಉಚಿತ ಕಾನೂನು ನೆರವು ಮತ್ತು ಅರಿವು ನೀಡುತ್ತದೆ. ಲೋಕ ಅದಾಲತ್ ಮೂಲಕ ರಾಜಿ ಸಂಧಾನ ಏರ್ಪಡಿಸಿ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವುದು ಪ್ರಾಧಿಕಾರದ ಉದ್ದೇಶವಾಗಿದೆ ಎಂದು ಅವರು ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ಕೆ.ಸರಸ್ವತಿ ಮಾತನಾಡಿ, ನಾವು ಶಿಸ್ತುಬದ್ಧ ಜೀವನ ನಡೆಸಿ ಇನ್ನೊಬ್ಬರಿಗೆ ತೊಂದರೆಯಾಗದಂತೆ ಬದುಕಬೇಕು ಎಂದರು.

ಉಪನ್ಯಾಸಕರಾದ ಸತೀಶ್, ನಮಿತ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಎಸ್.ಜಯಪ್ಪ ಇದ್ದರು.

ಭೂವಿಕ ಮತ್ತು ತಂಡದವರು ಪ್ರಾರ್ಥಿಸಿದರು. ಪ್ರಿಯಾ ಸ್ವಾಗತಿಸಿದರು. ನಿರ್ಮಲ ನಿರೂಪಿಸಿ, ವಂದಿಸಿದರು.