ಸಾರಾಂಶ
ರಾಮದುರ್ಗ: ಜೀವ ಬೆದರಿಕೆ ಇದೆ ಎಂದು ದೂರು ನೀಡಿದರೂ ಎಚ್ಚೆತ್ತುಕೊಳ್ಳದ ಪೊಲೀಸರ ಬಗ್ಗೆ ಜನರಲ್ಲಿ ನಂಬಿಕೆ ಇಲ್ಲದಂತಾಗಿದೆ. ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯ ಬಗ್ಗೆ ಸಾರ್ವಜನಿಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಗಂಗಾವತಿ ತಾಲೂಕ ನಿಜಶರಣ ಅಂಬಿಗರ ಚೌಡಯ್ಯ ಯುವಕ ಸಂಘದ ಅಧ್ಯಕ್ಷ ಹನಮೇಶ ಬಟಾರಿ ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ನಡೆದ ಅಂಜಿಲಿ ಹತ್ಯೆ ಖಂಡಿಸಿ ರಾಮದುರ್ಗ ತಾಲೂಕ ಗಂಗಾಮತಸ್ಥರ ಸಮಾಜ ಸಂಘದಿಂದ ಶನಿವಾರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆಯಾಗಿ ಕೆಲವೇ ದಿನಗಳು ಕಳೆದಿದ್ದು, ಅಷ್ಟರಲ್ಲಿಯೇ ಅಂಜಲಿ ಅಂಬಿಗೇರ ಹತ್ಯೆಯಾಗಿರುವದು ದುರದುಷ್ಟಕರ. ಇಡಿ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಮಾತನಾಡಿ, ಹುಬ್ಬಳ್ಳಿ ನಗರದ ಮೀರಾಪೂರ ಓಣಿಯ ನಿವಾಸಿ ಅಂಜಲಿ ಅಂಬಗೇರ ಎಂಬ ಯುವತಿಯ ಕೊಲೆ ಖಂಡನೀಯ. ಆರೋಪಿಯ ವಿರುದ್ಧ ಸೂಕ್ತ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯವನ್ನು ಮಾಡಿದರು. ದುಷ್ಟಶಕ್ತಿಗಳ ವಿರುದ್ದ ಕಠಿಣ ಕಾನೂನು ಜರುಗಿಸುವುದು ಅವಶ್ಯವಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.ಬಿಜೆಪಿ ಅಧ್ಯಕ್ಷ ರಾಜೇಶ ಬೀಳಗಿ, ತಾಲೂಕ ಗಂಗಾಮತಸ್ಥರ ಸಮಾಜ ಸಂಘದ ಉಪಾಧ್ಯಕ್ಷ ಯಲ್ಲಪ್ಪ ಬಾರ್ಕಿ, ರವಿಂದ್ರ ಬಿಷ್ಟನ್ನವರ, ಉದಯ ಸುಣಗಾರ, ಪ್ರಧಾನ ಕಾರ್ಯದರ್ಶಿ ಫಕೀರಪ್ಪ ಹೊಳೆಪ್ಪನವರ, ಕೋಶಾಧ್ಯಕ್ಷ ಗೋಪಾಲ ಸುಣಗಾರ ಹಾಗೂ ಇತತರು ಇದ್ದರು.