ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ, ಕರಾವಳಿ ಜಿಲ್ಲೆಗಳಿಗೆ ಯಾವುದೇ ರೀತಿಯ ಹೊಸ ಯೋಜನೆಗಳನ್ನು ಪ್ರಕಟಿಸದೆ ಮತ್ತೊಮ್ಮೆ ಇಲ್ಲಿನ ಜನತೆ ಕೈಗೆ ಚೊಂಬು ನೀಡಲಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಪ್ರತಿಕ್ರಿಯಿಸಿದ್ದಾರೆ.
ಉಡುಪಿ: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ, ಕರಾವಳಿ ಜಿಲ್ಲೆಗಳಿಗೆ ಯಾವುದೇ ರೀತಿಯ ಹೊಸ ಯೋಜನೆಗಳನ್ನು ಪ್ರಕಟಿಸದೆ ಮತ್ತೊಮ್ಮೆ ಇಲ್ಲಿನ ಜನತೆ ಕೈಗೆ ಚೊಂಬು ನೀಡಲಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಪ್ರತಿಕ್ರಿಯಿಸಿದ್ದಾರೆ.
ಕರಾವಳಿಯ ಮೀನುಗಾರಿಕೆ, ಪ್ರವಾಸೋದ್ಯಮ ಅಭಿವೃದ್ದಿ, ಬಂದರುಗಳ ಅಭಿವೃದ್ಧಿ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು, ಆದರೆ ಅಂತಹ ಯಾವುದೇ ಯೋಜನೆಗಳನ್ನು ವಿತ್ತ ಸಚಿವರು ಕರಾವಳಿ ಜಿಲ್ಲೆಗಳಿಗೆ ನೀಡದೆ ಮತ್ತೊಮ್ಮೆ ಮೋಸ ಮಾಡಿದ್ದಾರೆ. ದೊಡ್ಡ ಉದ್ಯಮಿಪತಿಗಳಿಗೆ ಈ ಬಾರಿಯ ಬಜೆಟ್ ಲಾಭದಾಯಕವಾಗಿದೆ ಹೊರತು ಮಧ್ಯಮ ವರ್ಗದವರ ಜೀವನ ಸುಧಾರಣೆಯ ನಿಟ್ಟಿನಲ್ಲಿ ಯಾವುದೇ ರೀತಿಯ ಘೋಷಣೆಗಳನ್ನು ಮಾಡಿಲ್ಲ.ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ರಾಜ್ಯದ ಅಭಿವೃದ್ದಿಯ ನಿಟ್ಟಿನಲ್ಲಿ ತಮ್ಮ ಬಜೆಟ್‌ನಲ್ಲಿ ನ್ಯಾಯ ಒದಗಿಸುವ ಕೆಲಸ ಮಾಡಿಲ್ಲ. ಕೃಷಿಕರಿಗೆ ಬೆಂಬಲವಾಗುವ ನಿಟ್ಟಿನಲ್ಲಿ ಪಿಎಂ ಕಿಸಾನ್ ಯೋಜನೆ ಮೊತ್ತವನ್ನು ಏರಿಕೆ ಮಾಡಬಹುದು ಎಂಬ ನಿರೀಕ್ಷೆ ಕೂಡ ಹುಸಿಯಾಗಿದೆ. ಕೃಷಿಕ ವರ್ಗದ ಕಲ್ಯಾಣದ ನಿಟ್ಟಿನಲ್ಲಿ ಯಾವುದೇ ಹೊಸ ಯೋಜನೆಗಳನ್ನು ಕೇಂದ್ರ ಸರಕಾರ ಘೋಷಣೆ ಮಾಡದಿರುವುದು ರೈತ ವರ್ಗಕ್ಕೆ ಮಾಡಿರುವ ಅನ್ಯಾಯವಾಗಿದೆ. ಇದೊಂದು ನಿರಾಶದಾಯಕ ಬಜೆಟ್ ಆಗಿದ್ದು, ರಾಜ್ಯ ಸರ್ಕಾರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಹೇಳಿದ್ದಾರೆ.