ಸಾರಾಂಶ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ನಡೆದಿರುವ ಪೋಕ್ಸೋ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ನಡೆಸಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸ್ಪಷ್ಟಪಡಿಸಿದರು.
ಕನ್ನಡ ಪ್ರಭ ವಾರ್ತೆ ಮುಧೋಳ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ನಡೆದಿರುವ ಪೋಕ್ಸೋ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ನಡೆಸಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸ್ಪಷ್ಟಪಡಿಸಿದರು.ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ತನಿಖೆಯನ್ನು ಸಿಐಡಿ ಸಂಸ್ಥೆ ನಡೆಸುತ್ತಿದ್ದು, ಕೋರ್ಟ್ ನಿರ್ದೇಶನದಂತೆ ತನಿಖಾಧಿಕಾರಿಗಳ ಮುಂದೆ ವಿಚಾರಣೆಗಾಗಿ ಹಾಜರಾಗುವಂತೆ ಹೈಕೋರ್ಟ್ ಬಿಎಸ್‌ವೈಗೆ ಆದೇಶಿಸಿದೆ. ಅದರಂತೆ ಅವರು ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಾರೆ. ಆದರೆ, ಇಳಿವಯಸ್ಸಿನಲ್ಲಿ ಅವರಿಗೆ ಇಂತಹ ಪ್ರಕರಣ ದಾಖಲಾಗಬಾರದಿತ್ತು. ಆದರೆ ಸಂತ್ರಸ್ತೆ ದೂರು ದಾಖಲಿಸಿರುವುದರಿಂದ ಅವರು ತನಿಖೆಗೆ ಸಹಕರಿಸಲೇಬೇಕಾಗುತ್ತದೆ. ಇದನ್ನೇ ಕೆಲವರು ಮುಂದಿಟ್ಟುಕೊಂಡು ಜಾತಿ ಲೇಪನ ಮಾಡಲು ಮುಂದಾಗುತ್ತಿದ್ದಾರೆ. ಇದರಲ್ಲಿ ಸರ್ಕಾರದ ಯಾವುದೇ ರೀತಿಯ ಪಾತ್ರವಿಲ್ಲ, ಮುಖ್ಯಮಂತ್ರಿಗಳಾಗಲಿ, ಉಪಮುಖ್ಯಮಂತ್ರಿಗಳಾಗಲಿ ಈ ಪ್ರಕರಣದಲ್ಲಿ ಯಾವುದೇ ರೀತಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸಚಿವರು ತಿಳಿಸಿದರು.