ಸಾರಾಂಶ
ಸರ್ಕಾರಗಳು ರೈತರ ಪರ ಕೆಲಸ ಮಾಡೋದು ತುಂಬಾನೆ ವಿರಳ. ಆದರೆ ಬಂಡವಾಳಷಾಹಿಗಳ ಪರವಾಗಿ ಕೆಲಸ ಮಾಡೋಕೆ ಮುಂದಿರುತ್ತಾರೆ. ದೊಡ್ಡ ದೊಡ್ಡ ಉದ್ದಿಮೆದಾರರ ಸಾಲ ಮನ್ನಾ ಮಾಡುತ್ತಾರೆ. ಆದರೆ ರೈತರ ಸಾಲ ಮನ್ನಾ ಮಾಡಲು ಮೀನಮೇಷ ಎಣಿಸುತ್ತಾರೆ. ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಅಖಿಲ ಕರ್ನಾಟಕ ರೈತ ಸಂಘಟನೆ ಸ್ಥಾಪಿಸಲಾಗಿದೆ.
ಕನ್ನಡಪ್ರಭ ವಾರ್ತೆ ಗುಡಿಬಂಡೆ
ದೇಶವನ್ನು ಆಳುತ್ತಿರುವ ಸರ್ಕಾರಗಳು ಬಂಡವಾಳಷಾಹಿಗಳ ಪರ, ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡುತ್ತವೆಯೇ ವಿನಹ ರೈತರ ಪರ ಕೆಲಸ ಮಾಡೊಲ್ಲ. ಈ ನಿಟ್ಟಿನಲ್ಲಿ ಎಲ್ಲಾ ರೈತರು ಒಗ್ಗಟ್ಟಿನಿಂದ ಹೋರಾಟ ಮಾಡಬೇಕಾಗಿದೆ ಎಂದು ಅಖಿಲ ಕರ್ನಾಟಕ ರೈತ ಸಂಘಟನೆಯ ಜಿಲ್ಲಾ ಸಹ ಸಂಚಾಲಕ ಹೆಚ್.ಪಿ.ಲಕ್ಷ್ಮೀನಾರಾಯಣ ತಿಳಿಸಿದರು.ಪಟ್ಟಣದ ಗಜನಾಣ್ಯ ಕಲ್ಯಾಣ ಮಂಟಪದಲ್ಲಿ ಅಖಿಲ ಕರ್ನಾಟಕ ರೈತ ಸಂಘಟನೆಯ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ರೈತರ ಸಮಾವೇಶದಲ್ಲಿ ಮಾತನಾಡಿದ ಅವರು, ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ಅಖಿಲ ಕರ್ನಾಟಕ ರೈತ ಸಂಘಟನೆ ಸ್ಥಾಪಿಸಿರುವುದಾಗಿ ತಿಳಿಸಿದರು.
ಉದ್ಯಮಿಗಳ ಸಾಲ ಮನ್ನಾಈ ಸಂಬಂಧ ಜಿಲ್ಲೆಯಾದ್ಯಂತ ರೈತರ ಸಮಾವೇಶಗಳನ್ನು ಮಾಡಲಾಗುತ್ತಿದೆ. ಇನ್ನೂ ಸರ್ಕಾರಗಳು ರೈತರ ಪರ ಕೆಲಸ ಮಾಡೋದು ತುಂಬಾನೆ ವಿರಳ. ಆದರೆ ಬಂಡವಾಳಷಾಹಿಗಳ ಪರವಾಗಿ ಕೆಲಸ ಮಾಡೋಕೆ ಮುಂದಿರುತ್ತಾರೆ. ದೊಡ್ಡ ದೊಡ್ಡ ಉದ್ದಿಮೆದಾರರ ಸಾಲ ಮನ್ನಾ ಮಾಡುತ್ತಾರೆ. ಆದರೆ ರೈತರ ಸಾಲ ಮನ್ನಾ ಮಾಡಲು ಮೀನಮೇಷ ಎಣಿಸುತ್ತಾರೆ. ಆದ್ದರಿಂದ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಬೇಕಿದೆ ಎಂದರು.
ಬಳಿಕ ಸಂಘಟನೆಯ ಜಿಲ್ಲಾ ಸಂಚಾಲಕ ಮಂಜುನಾಥರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ವಿವಿಧ ರೀತಿಯ ಸಮಸ್ಯೆಗಳನ್ನು ರೈತರು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳನ್ನು ಎದುರಿಸಲು ಹಾಗೂ ಬಗೆಹರಿಸಲು ಜಿಲ್ಲೆಯಲ್ಲಿ ಹೊಸ ರೈತ ಸಂಘಟನೆಯನ್ನು ಕಟ್ಟುತ್ತಿದ್ದೇವೆ ಎಂದರು.ಈ ಸಮಯದಲ್ಲಿ ಕೋಚಿಮುಲ್ ನಿರ್ದೇಶಕರಾದ ಆದಿನಾರಾಯಣರೆಡ್ಡಿ, ಮುಖಂಡರಾದ ನರಸಿಂಹಮೂರ್ತಿ, ಬಾಲಕೃಷ್ಣಾರೆಡ್ಡಿ, ರವಿಚಂದ್ರರೆಡ್ಡಿ, ಚೌಡರೆಡ್ಡಿ, ಹೇಮಚಂದ್ರ, ಶ್ರೀರಾಮ ನಾಯಕ್ ಸೇರಿದಂತೆ ಹಲವರು ಇದ್ದರು.