ರನ್ನ ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ ನಡೆದಿಲ್ಲ: ತಿಮ್ಮಾಪೂರ

| Published : Sep 09 2025, 01:01 AM IST

ಸಾರಾಂಶ

ರೈತರ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಟೆಂಡರ್ ಹಂಚಿಕೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಸ್ಪಷ್ಟಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ರೈತರ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಟೆಂಡರ್ ಹಂಚಿಕೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾರ್ಖಾನೆ ವಿಯಷದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಿದ್ದಾರೂಢ ಕಂಬಳಿ ಅವರು ಲೋಕಾಯುಕ್ತಕ್ಕೆ ಸಲ್ಲಿಸಿದ ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು. ಕಾರ್ಖಾನೆ ಲೀಜ್ ಕೊಡುವ ವಿಷಯ ಕುರಿತು ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ ಟೆಂಡರ್ ಮಾಡಲಾಗಿದೆ. ಸಹಕಾರಿ ಸಂಸ್ಥೆ ಉಳಿಸಲು ಸಾಕಷ್ಟು ಪ್ರಯತ್ನಪಟ್ಟು ರೈತರ ಆಶಯಕ್ಕೆ ತಕ್ಕಂತೆ ಸರ್ಕಾರ ನಡೆದುಕೊಂಡ ಪರಿಣಾಮ ಇಂದು ಕಾರ್ಖಾನೆ ಕಾರ್ಯನಿರ್ವಹಿಸುತ್ತಿದೆ ಎಂದರು.