ಕಾಂಗ್ರೆಸ್‌ ನಾಯಕರಲ್ಲಿ ಗಟ್ಟಿ ಧ್ವನಿ ಇಲ್ಲ: ಕೂಡಲಶ್ರೀ

| Published : Sep 23 2024, 01:18 AM IST

ಕಾಂಗ್ರೆಸ್‌ ನಾಯಕರಲ್ಲಿ ಗಟ್ಟಿ ಧ್ವನಿ ಇಲ್ಲ: ಕೂಡಲಶ್ರೀ
Share this Article
  • FB
  • TW
  • Linkdin
  • Email

ಸಾರಾಂಶ

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಂತೆ ಮಾತನಾಡುವ ಗಟ್ಟಿಧ್ವನಿ ಕಾಂಗ್ರೆಸ್‌ ನಾಯಕರಲ್ಲಿ ಇಲ್ಲ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಂತೆ ಮಾತನಾಡುವ ಗಟ್ಟಿಧ್ವನಿ ಕಾಂಗ್ರೆಸ್‌ ನಾಯಕರಲ್ಲಿ ಇಲ್ಲ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳರಂತೆ ಮಾತನಾಡುವ ಧೈರ್ಯ, ಶಕ್ತಿ ಎಲ್ಲರಿಗೂ ಬರಬೇಕಿದೆ. ನಮ್ಮ ಸಮಾಜದ ಪರವಾಗಿ ಗಟ್ಟಿಧ್ವನಿ ಕೇಳಿಬರಬೇಕಿದೆ ಎಂದು ಆಗ್ರಹಿಸಿದರು.

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕಳೆದ ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದ್ದೇವೆ. ಆದರೆ, ನಮ್ಮ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಕೂಡ ಓರ್ವ ವಕೀಲರಾಗಿದ್ದಾರೆ. ಹಾಗಾಗಿ, ವಕೀಲರ ಮೂಲಕ ಅವರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ಸಭೆ ಕರೆಯುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ, ಈವರೆಗೂ ಸಭೆ ಕರೆದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಿಮ್ಮ ಸರ್ಕಾರ ಬರಲು ನಮ್ಮ ಲಿಂಗಾಯತ ಸಮಾಜದ ಕೊಡುಗೆ ಅಪಾರವಿದೆ. ಲಿಂಗಾಯತರು ನಮಗೆ ಮತ ಹಾಕಿಲ್ಲ ಎಂದು ನೀವು ತಿಳಿದುಕೊಂಡಿದ್ದೀರಿ. ಆದರೆ, ನಮ್ಮ ಸಮಾಜಕ್ಕೆ 2ಎ ಮೀಸಲಾತಿ ಕೊಡಲು ಆಗದಿದ್ದರೆ ಒಬಿಸಿ ಮೀಸಲಾತಿಯನ್ನಾದರೂ ನೀಡಬೇಕು ಎಂದು ಆಗ್ರಹಿಸಿದರು.