ಗ್ರಾಮೀಣ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಬಡ ಜನರು ಆರೋಗ್ಯ ಸೇವೆ ಪಡೆಯಲು ಕಷ್ಟಕರವಾದ ಇಂದಿನ ದಿನಗಳಲ್ಲಿ ನಿವೃತ್ತ ನೌಕರರು ಉಚಿತ ಆರೋಗ್ಯ ಶಿಬಿರ ಏರ್ಪಡಿಸಿರುವುದಕ್ಕೆ ಶ್ಲಾಘಿನೀಯ.

ಕನ್ನಡಪ್ರಭ ವಾರ್ತೆ ಮದ್ದೂರು

ಮನುಷ್ಯನಿಗೆ ಎಷ್ಟೇ ಐಶ್ವರ್ಯ ಅಂತಸ್ತು ಇದ್ದರೂ ಆರೋಗ್ಯವೇ ಮಹಾ ಭಾಗ್ಯವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ಪಟ್ಟಣದ ಮಹಿಳಾ ಸರ್ಕಾರಿ ಶಾಲೆ ಕಾಲೇಜು ಆವರಣದಲ್ಲಿ ತಾಲೂಕು ನಿವೃತ್ತ ನೌಕರರ ಸಂಘ ವೈಯ್ಯಾ ವಿಕಾಸ್ ಹಾಗೂ ಮೈಸೂರು ನಾರಾಯಣ ಆಸ್ಪತ್ರೆ ಸಹಯೋಗದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಬಡ ಜನರು ಆರೋಗ್ಯ ಸೇವೆ ಪಡೆಯಲು ಕಷ್ಟಕರವಾದ ಇಂದಿನ ದಿನಗಳಲ್ಲಿ ನಿವೃತ್ತ ನೌಕರರು ಉಚಿತ ಆರೋಗ್ಯ ಶಿಬಿರ ಏರ್ಪಡಿಸಿರುವುದಕ್ಕೆ ಶ್ಲಾಘಿಸಿದರು.

ಶಿಬಿರದಲ್ಲಿ ರಕ್ತದೊತ್ತಡ, ಇಸಿಜಿ, ಗಂಟಲು, ಕಣ್ಣು, ಮತ್ತು ಹೃದಯಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳ ಬಗ್ಗೆ ನೂರ ಎಪ್ಪತ್ತಕ್ಕೂ ಹೆಚ್ಚು ಮಂದಿ ಶಿಬಿರಾರ್ಥಿಗಳು ತಪಾಸಣೆಗೆ ಒಳಗಾಗಿ ತಜ್ಞ ವೈದ್ಯರಿಂದ ಚಿಕಿತ್ಸೆ ಮತ್ತು ಸಲಹೆ ಸೂಚನೆ ಪಡೆದುಕೊಂಡರು.

ತಾಲೂಕು ನಿವೃತ್ತ ನೌಕರರ ಸಂಘದ ಎಚ್.ಎಂ.ಮಲ್ಲಯ್ಯ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷ ಡಾ.ಎಲ್. ಬೈರಪ್ಪ, ಪ್ರಧಾನ ಕಾರ್ಯದರ್ಶಿ ರಂಗೇಗೌಡ, ತಾಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಚ್.ಕೆ.ನಾರಾಯಣ, ತಾಲೂಕು ನಿವೃತ್ತ ನೌಕರರ ಸಂಘದ ಗೌರವಾಧ್ಯಕ್ಷ ಮುದ್ದೇಗೌಡ, ಖಜಾಂಚಿ ಎಂ.ಗೋಪಾಲಕೃಷ್ಣ. ಕಾರ್ಯದರ್ಶಿ ಚಿಕ್ಕ ಪುಟ್ಟಯ್ಯ, ಉಪಾಧ್ಯಕ್ಷ ಪುಟ್ಟೇಗೌಡ, ಕಾರ್ಯಾಧ್ಯಕ್ಷ ಎಂ.ಎಚ್. ಸಿದ್ದೇಗೌಡ ಪದಾಧಿಕಾರಿಗಳಾದ ಪುಟ್ಟಸ್ವಾಮಿ, ಮಲ್ಲೇಶಪ್ಪ, ದಾಸೇಗೌಡ, ಶಿವಲಿಂಗಯ್ಯ ದೊರೆಸ್ವಾಮಿ,.ಮರಿ ದೇವೇಗೌಡ, ಗಿರಿಜಮ್ಮ, ಪದ್ಮ ಮತ್ತಿತರರು ಇದ್ದರು.

ಅಜೋಲ್ಲಾ ತಯಾರಿಕೆ ಕುರಿತು ಪ್ರಾತ್ಯಕ್ಷಿಕೆಪಾಂಡವಪುರ:ತಾಲೂಕಿನ ಸಿಂಗ್ರೀಗೌಡನಕೊಪ್ಪಲು ಗ್ರಾಮದಲ್ಲಿ ಅಜೋಲ್ಲಾ ತಯಾರಿಕೆ ಕುರಿತು ಪ್ರಾತ್ಯಕ್ಷಿಕೆ ನಡೆಯಿತು.

ಮಂಡ್ಯ ವಿ.ಸಿ.ಫಾರಂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ , ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಡಿ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.ಶಿಬರದಲ್ಲಿ ಗ್ರಾಮಸ್ಥರಿಗೆ ಅಜೋಲ್ಲಾದ ಪ್ರಯೋಜನಗಳು, ಬಳಕೆಯ ವಿಧಾನ, ಮತ್ತು ತಯಾರಿಕಾ ಪ್ರಕ್ರಿಯೆಯ ಬಗ್ಗೆ ವಿವರವಾಗಿ ತಿಳಿಸಲಾಯಿತು. ಅಜೋಲ್ಲಾ ಗುಂಡಿ, ತೊಟ್ಟಿಯ ಆಯಾಮಗಳ ಬಗ್ಗೆಯೂ ಮಾಹಿತಿ ನೀಡಲಾಯಿತು. ಪ್ರಾಯೋಗಿಕವಾಗಿ ಅಜೋಲ್ಲಾ ತಯಾರಿಕೆ ಪ್ರಾತ್ಯಕ್ಷಿಕೆ ಮೂಲಕ ಪ್ರದರ್ಶಿಸಿದರು.

ಗ್ರಾಮಸ್ಥರು ಉತ್ಸಾಹದಿಂದ ಭಾಗವಹಿಸಿ, ಅಜೋಲ್ಲಾ ಬೆಳೆಸುವ ಕುರಿತು ಹಲವು ಪ್ರಶ್ನೆಗಳನ್ನು ಕೇಳಿ ಸ್ಪಷ್ಟನೆ ಪಡೆದುಕೊಂಡರು.