ಸಾರಾಂಶ
ಯಕ್ಷಗಾನ ಪ್ರದರ್ಶನಕ್ಕಾಗುತ್ತಿರುವ ತೊಂದರೆ ಬಗ್ಗೆ ಶಾಸಕ ಸುನಿಲ್ ಕುಮಾರ್ ಸದನದಲ್ಲಿ ಪ್ರಸ್ತಾಪಕನ್ನಡಪ್ರಭ ವಾರ್ತೆ ಉಡುಪಿಯಕ್ಷಗಾನ ನಮ್ಮ ಸಂಸ್ಕೃತಿ, ದೇಶದ ಆಸ್ತಿ. ಇದಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು. ಯಾವುದೇ ಸಮಸ್ಯೆ ಇಲ್ಲದೇ ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.ವಿಧಾನಸಭೆಯ ಗಮನ ಸೆಳೆವ ಚರ್ಚೆ ವೇಳೆ ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್ ಅವರು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿರುವ ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ಪಡೆಯುವ ವಿಷಯದಲ್ಲಿ ಆಗುತ್ತಿರುವ ಅನನುಕೂಲತೆ ಬಗ್ಗೆ ಗೃಹ ಸಚಿವರ ಗಮನ ಸೆಳೆದರು. ಗೃಹ ಸಚಿವರ ಪರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಉತ್ತರ ನೀಡಿದರು.ಯಕ್ಷಗಾನ ಪ್ರದರ್ಶನಕ್ಕೆ ಪೂರ್ವಾನುಮತಿ ಪಡೆಯಲು ಸಮಸ್ಯೆಯಾಗುತ್ತಿದೆ ಎಂದು ಸುನೀಲ್ ಕುಮಾರ್ ಅವರು ಪ್ರಸ್ತಾಪಿಸಿದ್ದಾರೆ. ಯಕ್ಷಗಾನ ಮಾಡುವಾಗ ಯಾರೂ ಇಂದು ಅರ್ಜಿ ಹಾಕಿ ನಾಳೆ ಯಕ್ಷಗಾನ ಪ್ರದರ್ಶನ ಮಾಡುವುದಿಲ್ಲ. ಅದಕ್ಕೆ 15 ದಿನಗಳ ತಯಾರಿ ಇರುತ್ತದೆ. ಬಿಜೆಪಿ ಕಾಲದಲ್ಲೂ ಕೆಲವು ನಿಯಮಾವಳಿಗಳನ್ನು ರೂಪಿಸಲಾಗಿದೆ. ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ಪಡೆಯಲು ಕಾಲಾವಕಾಶ ನೀಡಬೇಕು. ಯಕ್ಷಗಾನ ಬೆಳಗಿನ ಜಾವದವರೆಗೂ ನಡೆಯುವುದರಿಂದ ಮಧ್ಯರಾತ್ರಿಯೇ ನಿಲ್ಲಿಸಬೇಕು ಎಂದು ಯಾರೂ ಆಕ್ಷೇಪ ಮಾಡುವುದಿಲ್ಲ. ಈಗ ಆಗಿರುವ ಪ್ರಕರಣವನ್ನು ಪರಿಶೀಲನೆ ಮಾಡುತ್ತೇವೆ. ಯಕ್ಷಗಾನ, ಬಯಲಾಟ ದೇಶದ ಆಸ್ತಿ. ಇದಕ್ಕೆ ಪ್ರೋತ್ಸಾಹ ನೀಡಬೇಕು ಎಂಬುದು ನಮ್ಮ ಉದ್ದೇಶವಿದೆ. ನಮ್ಮ ಸಂಸ್ಕೃತಿ ಪರಂಪರೆಯನ್ನು ನಿಲ್ಲಿಸಲು ಆಗುವುದಿಲ್ಲ ಎಂದು ಭರವಸೆ ನೀಡಿದರು.ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ಪ್ರತ್ಯೇಕ ಸಭೆ: ಡಿ.ಕೆ. ಶಿವಕುಮಾರ್ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು.ಬಿಜೆಪಿಯ ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ ಭಾಗವನ್ನು ವಿಶೇಷವಾಗಿ ಪರಿಗಣಿಸಬೇಕು ಎಂದು ಕೇಳಿದರು. ಇದಕ್ಕೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, ಪ್ರವಾಸೋದ್ಯಮ ಸಚಿವರು ಈ ಬಗ್ಗೆ ನಾವು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.ಈ ವೇಳೆ ಬಿಜೆಪಿ ಶಾಸಕ ಹರೀಶ್ ಪೂಂಜ, ಕರಾವಳಿ ಭಾಗದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಬರುವ ಜನರನ್ನು ಇತರೇ ಪ್ರವಾಸೋದ್ಯಮ ಸ್ಥಳಗಳಿಗೆ ಆಕರ್ಷಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.ಇದಕ್ಕೆ ಶಿವಕುಮಾರ್, ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಬಹುತೇಕ ಯುವಕರು ಗೆದ್ದು ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಸೇರಿದಂತೆ ದೊಡ್ಡ ಅವಕಾಶ ಕರಾವಳಿ ಭಾಗದಲ್ಲಿದೆ. ಹೀಗಾಗಿ ನಮ್ಮ ಸಚಿವರಾದ ಎಚ್.ಕೆ ಪಾಟೀಲ್ ಅವರು ದೊಡ್ಡ ಕನಸು ಕಂಡಿದ್ದು ನಾವು ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ. ಈ ಸಂದರ್ಭದಲ್ಲಿ ಈ ಭಾಗದ ಶಾಸಕರ ಸಭೆ ಕರೆದು ಮಾತನಾಡಬೇಕಿದೆ. ರಾತ್ರಿ 7-8 ಗಂಟೆಯ ಮೇಲೆ ಈ ಕರಾವಳಿ ಭಾಗ ಸ್ತಬ್ಧವಾಗುತ್ತದೆ. ಯಾವುದೇ ಕಾರ್ಯಚಟುವಟಿಕೆ ಇರುವುದಿಲ್ಲ. ಧಾರ್ಮಿಕವಾದ ಭಜನೆ, ಬಯಲಾಟ ಹೊರತಾಗಿ ಬೇರೆ ಯಾವುದೇ ಚಟುವಟಿಕೆ ಇರುವುದಿಲ್ಲ. ಈ ವಿಚಾರವಾಗಿ ಅಲ್ಲಿನ ಶಾಸಕರೇ ಕೂತು ಚರ್ಚೆ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ನೀಡಬೇಕು ಎಂದು ಸಲಹೆ ಮಾಡಿದರು.