ಮೋದಿ ಪ್ರಧಾನಿ ಆಗೋದನ್ನು ತಪ್ಪಿಸಲು ಯಾರಿಂದಲೂ ಆಗೋದಿಲ್ಲ: ವಿಶ್ವನಾಥ್‌

| Published : Mar 29 2024, 02:03 AM IST / Updated: Mar 29 2024, 02:04 AM IST

ಮೋದಿ ಪ್ರಧಾನಿ ಆಗೋದನ್ನು ತಪ್ಪಿಸಲು ಯಾರಿಂದಲೂ ಆಗೋದಿಲ್ಲ: ವಿಶ್ವನಾಥ್‌
Share this Article
  • FB
  • TW
  • Linkdin
  • Email

ಸಾರಾಂಶ

ದೇಶದಲ್ಲಿ ಬಿಜೆಪಿ ಪರ ಒಲವಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಯಲಹಂಕ ಶಾಸಕ ವಿಶ್ವನಾಥ್‌ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಯಲಹಂಕ

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರ ಪ್ರಬಲವಾದ ಅಲೆಯಿದೆ. ಮೋದಿ ಪ್ರಧಾನಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.

ಯಲಹಂಕ ಕ್ಷೇತ್ರದ ಮೈಲಪ್ಪನಹಳ್ಳಿ ಸಮೀಪವಿರುವ ಕೇಸರಿವನದಲ್ಲಿ ಬುಧವಾರ ಏರ್ಪಡಿಸಿದ್ದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ನನ್ನ ಜೀವಮಾನದಲ್ಲಿ ಪಕ್ಷ ದ್ರೋಹದ ಕೆಲಸವನ್ನು ಹಿಂದೆಂದೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ, ಏಪ್ರಿಲ್ ಮೊದಲ ವಾರದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಮತಯಾಚನೆಗೆ ತೆರಳಲಿದ್ದು, ನರೇಂದ್ರ ಮೋದಿ ಅವರಿಗಾಗಿ ಮತಯಾಚಿಸುವೆ. ಮೋದಿಯವರ ಗೆಲುವು ನಮಗೆ ಪ್ರಮುಖ ವಿಷಯವಾಗಿದೆ. ಅವರ ಹೆಸರಲ್ಲಿ ಕ್ಷೇತ್ರದಲ್ಲಿ ಮತಯಾಚನೆ ಮಾಡುವುದಾಗಿ ತಿಳಿಸಿದರು.

ಬಿಜೆಪಿ ಯುವ ಮುಖಂಡ ಅಲೋಕ್ ವಿಶ್ವನಾಥ್, ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಎಚ್.ಬಿ.ಹನುಮಯ್ಯ, ಎಂ.ಸತೀಶ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಜಿಲ್ಲಾಧ್ಯಕ್ಷ ಜಿ.ಜೆ.ಮೂರ್ತಿ, ಯಲಹಂಕ ಗ್ರಾ.ಮಂಡಲ ಅಧ್ಯಕ್ಷ ಎಚ್.ಸಿ. ರಾಜೇಶ್, ಎ.ಸಿ.ಮುನಿಕೃಷ್ಣಪ್ಪ, ಚೊಕ್ಕನಹಳ್ಳಿ ವೆಂಕಟೇಶ್, ಎಸ್.ಜಿ.ನರಸಿಂಹಮೂರ್ತಿ, ಅದ್ದೆ ವಿಶ್ವನಾಥಪುರ ಮಂಜುನಾಥ್, ಎಸ್.ಆರ್.ಜನಾರ್ದನ್, ಎಸ್.ಜಿ.ಪ್ರಶಾಂತ್ ರೆಡ್ಡಿ, ಎನ್.ಡಿ.ಜಗದೀಶ್, ಉದ್ದಂಡಯ್ಯ, ವೈ.ಜಿ.ವಸಂತ್, ಲಿಂಗನಹಳ್ಳಿ ವೆಂಕಟೇಶ್, ಅರಕೆರೆ ವಸಂತ್ ಇದ್ದರು.