ಸಾರಾಂಶ
ದಾವಣಗೆರೆ : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಯಾರ ಹೆಸರನ್ನೂ ಸೂಚಿಸಿಲ್ಲ. ನಾನು ಅಧ್ಯಕ್ಷನಾಗುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಂಸದನಾಗಿ ನಾನು ನನ್ನ ಕೆಲಸ ಮಾಡುತ್ತಿದ್ದೇನೆ. ಕೆಲವರು ತಮ್ಮ ಅಭಿಪ್ರಾಯ ಹೇಳುತ್ತಿದ್ದಾರೆ. ಏನೇ ಇದ್ದರೂ ನಮ್ಮ ಹೈಕಮಾಂಡ್ ಒಳ್ಳೆಯ ತೀರ್ಮಾನ ಮಾಡುತ್ತೆ. ಹೈಕಮಾಂಡ್ ಆಯ್ಕೆ ಮಾಡಿದ್ದೇ ಉತ್ತಮ ಎಂದು ಅವರು ಹೇಳಿದರು.
ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲಗಳು ಇಲ್ಲ. ನಮ್ಮ ಹೈಕಮಾಂಡ್ ಬಹಳ ಗಟ್ಟಿಯಾಗಿದೆ. ಈಗ ದೆಹಲಿ ಚುನಾವಣೆಯೂ ಮುಗಿದಿದ್ದು, ಪಕ್ಷ ಸಂಘಟನೆಗೆ ಇನ್ನು ವರಿಷ್ಠರು ಹೆಚ್ಚು ಸಮಯ ನೀಡುತ್ತಾರೆ. ಆಗ ಕರ್ನಾಟಕದ ಬಗ್ಗೆಯೂ ನಿರ್ಣಯವಾಗುತ್ತದೆ. ಎಲ್ಲವೂ ಶೀಘ್ರವೇ ಸುಖಾಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.---ಇವಿಎಂ ವಿರುದ್ಧ
ದೂರು ಫ್ಯಾಷನ್:
ದೆಹಲಿ ಚುನಾವಣೆಯ ಸೋಲಿಗೆ ಇವಿಎಂ ಕಾರಣ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿ, ಚುನಾವಣೆಗಳಲ್ಲಿ ಸೋತ ನಂತರ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ವಿಪಕ್ಷಗಳು ನಿರಂತರವಾಗಿ ಇಂತಹ ಆರೋಪಗಳನ್ನು ಮಾಡಿಕೊಂಡೇ ಬಂದಿವೆ ಎಂದು ಬಸವರಾಜ ಬೊಮ್ಮಾಯಿ ಟೀಕಿಸಿದರು.