ಮನುಷ್ಯನಿಗೆ ಮಾನವ ಹಕ್ಕುಗಳು ಹುಟ್ಟಿನಿಂದಲೆ ಪಡೆದುಕೊಂಡು ಬಂದಿರುವ ಹಕ್ಕುಗಳಾಗಿವೆ.
ಕೊಪ್ಪಳ: ಮಾನವ ಹಕ್ಕುಗಳಿಂದ ಯಾರೂ ವಂಚಿತರಾಗದಿರಲಿ ಎಂದು ರಾಜ್ಯ ವಕೀಲರ ಸಂಘದ ಸದಸ್ಯೆ ಸಂದ್ಯಾ ಬಿ. ಮಾದಿನೂರು ಹೇಳಿದರು.
ನಗರದ ಸಾಹಿತ್ಯ ಭವನದಲ್ಲಿ ಭಾನುವಾರ ಜರುಗಿದ ಕರ್ನಾಟಕ ಮಾನವ ಹಕ್ಕುಗಳ ಸಮಿತಿಯ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಮತ್ತು ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಯಾವುದೇ ಒಬ್ಬ ವ್ಯಕ್ತಿ ಮಾನವ ಹಕ್ಕುಗಳಿಂದ ವಂಚಿತರಾಗದಂತೆ ಜಿಲ್ಲಾ ಮಾನವ ಹಕ್ಕುಗಳ ಸಮಿತಿ ಕಾರ್ಯ ಮಾಡಲಿ. ಮಹಿಳೆಯರು ಇಂತಹ ಸಂಘಟನೆ ಮೂಲಕ ಮುಂದೆ ಬರಬೇಕು. ಜಿಲ್ಲೆಯಲ್ಲಿ ಯಾವುದೇ ನಾಗರಿಕ ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳುವ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ಈ ಮಾನವ ಹಕ್ಕುಗಳ ಜಿಲ್ಲಾ ಸಮಿತಿಯಿಂದ ಉತ್ತಮ ಕಾರ್ಯಕ್ರಮ ಆಯೋಜಿಸಿ ಸಾರ್ವಜನಿಕರಿಗೆ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.ವಕೀಲ ಎ.ವಿ. ಕಣವಿ ಮಾತನಾಡಿ, ಮನುಷ್ಯನಿಗೆ ಮಾನವ ಹಕ್ಕುಗಳು ಹುಟ್ಟಿನಿಂದಲೆ ಪಡೆದುಕೊಂಡು ಬಂದಿರುವ ಹಕ್ಕುಗಳಾಗಿವೆ. ಭಾರತದಲ್ಲಿ ವಿಶೇಷವಾಗಿ ಭಾರತದಲ್ಲಿ ಮಾನವ ಹಕ್ಕುಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರು ಮತ್ತು ಮಕ್ಕಳಿಗೆ ಮೂಲ ಹಕ್ಕು ನೀಡಬೇಕು. ಹಕ್ಕುಗಳ ಕುರಿತು ಸಾರ್ವಜನಿಕರಿಗೆ ಅರಿವು ಮತ್ತು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಮಾನವ ಹಕ್ಕುಗಳಿಗಾಗಿ ಹೋರಾಡಿದ ಪ್ರತಿಯೊಬ್ಬ ಮಹನೀಯರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. 140ಕೋಟಿ ಭಾರತೀಯ ನಾಗರಿಕರ ಹಕ್ಕುಗಳನ್ನು ರಕ್ಷಿಸುವ ಏಕೈಕ ಸಾಧನವೆಂದರು ನಮ್ಮ ಸಂವಿಧಾನ. ಪ್ರತಿಯೊಬ್ಬರಿಗೆ ಮಾನವ ಹಕ್ಕುಗಳ ರಕ್ಷಣೆ ಮಾಡುವ ಜವಾಬ್ದಾರಿ ಇದೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಆನಂದ ಹಳ್ಳಿ ಮಾತನಾಡಿ, ನಮ್ಮ ಜಿಲ್ಲಾ ವಕೀಲರ ಸಂಘದಿಂದ ಈ ಜಿಲ್ಲಾ ಮಾನವ ಹಕ್ಕುಗಳ ಘಟಕಕ್ಕೆ ಸದಾ ಸಹಕಾರ ನೀಡುತ್ತೇವೆ ಎಂದರು.ರಾಜ್ಯ ಮಾನವ ಹಕ್ಕುಗಳ ಸಮಿತಿ ಸಂಸ್ಥಾಪಕ ಅಧ್ಯಕ್ಷ ಶ್ರೀನಿವಾಸ್ ಗೌಡ ಜಿಲ್ಲಾ ಮಾನವ ಹಕ್ಕುಗಳ ಸಮಿತಿಯ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.
ಕರ್ನಾಟಕ ಮಾನವ ಹಕ್ಕುಗಳ ಸಮಿತಿ ಸಂಸ್ಥಾಪಕ ರಾಜ್ಯಧ್ಯಕ್ಷ ಶ್ರೀನಿವಾಸ್ ಗೌಡ ಮಾತನಾಡಿ, ಕೇಂದ್ರ ರಾಜ್ಯ ಉಪಾಧ್ಯಕ್ಷ ಪ್ರದೀಪ್ ಮಿತ್ತಲ್,ರಾಜ್ಯ ಮಾನವ ಹಕ್ಕುಗಳ ಸಮಿತಿ ಮೈನಾರಿಟಿ ಕಮೀಟಿ ಉಪಾಧ್ಯಕ್ಷ ರೀಜ್ವಾನ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಆನಂದ ಹಳ್ಳಿ, ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ವಿ.ಕಣವಿ, ಸಂಘದ ಕಾರ್ಯದರ್ಶಿ ಪ್ರಕಾಶ ಹಾದಿಮನಿ, ಜಿಲ್ಲಾ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷೆ ಪ್ರೇಮಾ ಎಸ್. ಮುದಗಲ್, ಉಪಾಧ್ಯಕ್ಷೆ ಸವಿತಾ ಉಮೇಶ ನಾಗರಡ್ಡಿ, ಪ್ರಧಾನ ಕಾರ್ಯದರ್ಶಿ ವಜೀರಸಾಬ್ ಎಚ್.ತಳಕಲ್, ನಿವೃತ್ತ ಶಿಕ್ಷಕ ಶಿವಪ್ಪ ನೋಟಗಾರ ಇತರರಿದ್ದರು.