ವಿಜಯಪುರ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತವೂ ಅತ್ಯಂತ ಅಮೂಲ್ಯವಾಗಿದೆ. ಅರ್ಹ ಮತದಾರರು ಒಬ್ಬರೂ ಸಹ ಮತದಾರರ ಪಟ್ಟಿಯಿಂದ ಹೊರಹೋಗದಂತೆ ನೋಡಿಕೊಳ್ಳಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.

ಪಟ್ಟಣದಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಮತ್ತು ವಿಜಯಪುರ ಬಿಎಲ್‌ಎ ೨-ಕಾರ್ಯಕರ್ತರ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ತಾವು ಈ ಹಿಂದೆ ಸಂಸದರಾಗಿದ್ದ ಸಂದರ್ಭದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯೊಬ್ಬರು ಕೇವಲ ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ದರು. ಅಷ್ಟೇ ಅಲ್ಲದೆ, ಹಿಂದೆ ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರವಿದ್ದಾಗ ಕಾಂಗ್ರೆಸ್ ಪಕ್ಷ ತಂದ ಅವಿಶ್ವಾಸ ನಿರ್ಣಯದ (ಓo-ಅoಟಿಜಿiಜeಟಿಛಿe ಒoಣioಟಿ) ಸಮಯದಲ್ಲಿ, ಬಿಹಾರದ ನೂತನ ಮುಖ್ಯಮಂತ್ರಿ ಕಾಂಗ್ರೆಸ್ ಅಭ್ಯರ್ಥಿ (ಅಂದಿನ ಸಂಸದರು) ಚಲಾಯಿಸಿದ ಆ ಒಂದು ಮತದ ಪರಿಣಾಮ ವಾಜಪೇಯಿ ಸರ್ಕಾರ ಕೇವಲ ಒಂದು ಮತದ ಅಂತರದಿಂದ ಪರಾಭವಗೊಂಡಿತ್ತು. ಇಡೀ ದೇಶದಲ್ಲೇ ಸಾರ್ವತ್ರಿಕ ಚುನಾವಣೆ ಎದುರಾಯಿತು. ಇದು ಒಂದು ಮತಕ್ಕಿರುವ ಶಕ್ತಿ. ಹಾಗಾಗಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒಂದು ಮತದ ಮಹತ್ವವನ್ನು ಹೇಳಿದರು.

ಪುರಸಭೆ ಸದಸ್ಯ ಎಂ.ಸತೀಶ್ ಕುಮಾರ್ ಮಾತನಾಡಿ, ಕೆಲವು ಪುರಸಭಾ ಸದಸ್ಯತ್ವದ ಆಕಾಂಕ್ಷಿಗಳು ತಮ್ಮ ವಾರ್ಡ್‌ಗಳಲ್ಲಿ ಮತದಾರರ ಸಂಖ್ಯೆ ಕಡಿಮೆಯಾದರೆ ತಮಗೆ ಚುನಾವಣೆಯಲ್ಲಿ ಗೆಲ್ಲಲು ಅನುಕೂಲವಾಗುತ್ತದೆ ಎಂಬ ತಪ್ಪು ಕಲ್ಪನೆಯಲ್ಲಿದ್ದಾರೆ. ಇಂತಹ ಸ್ವಾರ್ಥ ಆಲೋಚನೆಗಳಿಂದ ಯಾರೂ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು. ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ಸಿಗುವಂತೆ ಮಾಡಬೇಕು ಎಂದು ಕರೆ ನೀಡಿದರು.


ಮತಪಟ್ಟಿಯ ಗೊಂದಲ ನಿವಾರಿಸಿ: ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಬಾರಕ್ ಮಾತನಾಡಿ, ಪ್ರಸ್ತುತ ಮತಪಟ್ಟಿಗಳಲ್ಲಿ ಸಾಕಷ್ಟು ಗೊಂದಲ ಹಾಗೂ ಲೋಪದೋಷಗಳಿರುವುದು ಕಂಡುಬರುತ್ತಿದೆ. ಪಕ್ಷಾತೀತವಾಗಿ ಕಾರ್ಯಕರ್ತರು ಬಿಎಲ್‌ಒ ಹಾಗೂ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿ ಈ ಗೊಂದಲಗಳನ್ನು ನಿವಾರಿಸಬೇಕು. ಯಾವುದೇ ಮತದಾರರು ಪಟ್ಟಿಯಿಂದ ವಂಚಿತರಾಗದಂತೆ ನೋಡಿಕೊಂಡರೆ, ನಂತರ ನಮ್ಮ ಸೇವೆಯನ್ನು ಗುರುತಿಸಿ ಸಾರ್ವಜನಿಕರು ನಮಗೆ ಮತ ನೀಡುತ್ತಾರೆ ಎಂದರು.

ಕೋಟ್ಯಂತರ ಮತದಾರರು ಪಟ್ಟಿಯಿಂದ ಹೊರಗುಳಿದಿದ್ದಾರೆ

ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಮಾತನಾಡಿ, ದೇಶದಾದ್ಯಂತ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Summಚಿಡಿಥಿ ಖevisioಟಿ) ಸಂದರ್ಭದಲ್ಲಿ ಕೋಟ್ಯಂತರ ಮತದಾರರು ಪಟ್ಟಿಯಿಂದ ಹೊರಗುಳಿದಿದ್ದಾರೆ. ಅದರಲ್ಲಿಯೂ ವಿಶೇಷವಾಗಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (Sಅ/Sಖಿ) ವ್ಯಕ್ತಿಗಳು ಮತದಾನದ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ. ಸಾಂಪ್ರದಾಯಿಕವಾಗಿ ಇವರೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವವರಾಗಿದ್ದು, ಈ ಹಿಂದೆ ಬಿಹಾರ ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ಹಲವೆಡೆ ಇದರಿಂದಾಗಿ ಪಕ್ಷಕ್ಕೆ ಹಿನ್ನಡೆಯಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಜಾಗರೂಕರಾಗಿ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಅಧಿಕಾರಿಗಳಿಂದ ಗೊಂದಲ ನಿವಾರಣೆ ಹಾಗೂ ಗಣ್ಯರ ಉಪಸ್ಥಿತಿ

ತಹಸೀಲ್ದಾರ್ ಅನಿಲ್ ಕುಮಾರ್, ನಾಡಕಚೇರಿಯ ಆಡಳಿತ ಅಧಿಕಾರಿಗಳು ಹಾಗೂ ಪುರಸಭೆಯ ಮುಖ್ಯ ಅಧಿಕಾರಿ ಸತ್ಯನಾರಾಯಣ ಮತ್ತು ಸಿಬ್ಬಂದಿ ವರ್ಗದವರು, ಬಿ.ಎಲ್.ಓ.ಗಳು ಕೇಳಿದ ಹಲವು ತಾಂತ್ರಿಕ ಅನುಮಾನಗಳು ಹಾಗೂ ಪ್ರಶ್ನೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಬಿ. ರಾಜಣ್ಣ, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನ್ನೂರು ವೆಂಕಟೇಶ್, ಟೌನ್ ಕಾಂಗ್ರೆಸ್ ಅಧ್ಯಕ್ಷ ವಿ.ಎಂ.ನಾಗರಾಜು, ಟೌನ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಫ್ಜಲ್, ಹಿಂದುಳಿದ ವರ್ಗಗಳ ಮುಖಂಡ ಲೋಕೇಶ್, ಪುರಸಭೆಯ ಮಾಜಿ ಸದಸ್ಯರುಗಳು ಹಾಗೂ ಬಿಎಲ್ಎ-೨ (ಃಐಂ-೨) ಕಾರ್ಯಕರ್ತರು ಉಪಸ್ಥಿತರಿದ್ದರು.