ಸಾರಾಂಶ
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಬಿಜೆಪಿಯಿಂದ ಧರ್ಮಸ್ಥಳ ಚಲೋ ಸಂಬಂಧ ಸೋಮವಾರ (ಇಂದು) ವಿಧಾನಸಭೆ ಸದನದಲ್ಲಿ ಸಂಪೂರ್ಣ ಉತ್ತರ ನೀಡುತ್ತೇನೆ ಎಂದು ಗೃಹ ಸಚಿವ ಜಿ.ಡಾ. ಪರಮೇಶ್ವರ್ ಪ್ರತಿಕ್ರಿಯಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಧರ್ಮಸ್ಥಳ ವಿಚಾರದಲ್ಲಿ ಯಾರೂ ಸಹ ರಾಜಕಾರಣ ಮಾಡಬಾರದು. ಧರ್ಮಸ್ಥಳ ಪ್ರಕರಣ ನ್ಯಾಯಕ್ಕೆ ಹಾಗೂ ಕಾನೂನಿಗೆ ಸಂಬಂಧಿಸಿದ್ದು. ಯಾವುದೇ ವ್ಯಕ್ತಿ ಕಂಪ್ಲೇಂಟ್ ಕೊಟ್ಟರೆ ಪೊಲೀಸರು ಎಫ್ಐಆರ್ ಹಾಕಿ ತನಿಖೆ ಮಾಡ್ತಾರೆ. ತಪ್ಪು ಕಂಡು ಬಂದರೆ ಮಾತ್ರ ಕೇಸ್ ಮುಂದುವರಿಸುತ್ತಾರೆ. ಅಷ್ಟಕ್ಕೇ ಸೀಮಿತವಾಗಬೇಕೆ ವಿನಃ ರಾಜಕೀಯ ಮಾಡಬಾರದು ಎಂದು ಬಿಜೆಪಿಗರಿಗೆ ಪರೋಕ್ಷವಾಗಿ ಛಾಟಿ ಬೀಸಿದರು.
ಧಾರ್ಮಿಕ ವಿಚಾರ ಎಳೆದು ತರೋದು ಸರಿಯಲ್ಲ. ಎಸ್ಐಟಿ ತನಿಖೆ ಪೂರ್ಣಗೊಳ್ಳಲು ಬಿಡಬೇಕು. ಸತ್ಯಾಸತ್ಯತೆ ಗೊತ್ತಾಗುತ್ತೆ ಅಲ್ಲಿಯ ತನಕ ಸ್ವಲ್ಪ ಕಾಯಬೇಕಲ್ವ ಎಂದರು.ಎಸ್‌ಐಟಿಗೆ ಬಿಟ್ಟ ವಿಚಾರ:ಧರ್ಮಸ್ಥಳ ಪ್ರಕರಣದಲ್ಲಿ ಮಧ್ಯಂತರ ವರದಿ ಕೊಡಬೇಕಾ? ಅಂತಿಮ ವರದಿ ಕೊಡಬೇಕಾ? ಎನ್ನೋದು ಎಸ್ಐಟಿಗೆ ಬಿಟ್ಟ ವಿಚಾರ. ರಾಜ್ಯ ಸರ್ಕಾರ ಎಸ್‌ಐಟಿಗೆ ಯಾವುದೇ ನಿರ್ದೇಶನ ಕೊಡಲ್ಲ ಮತ್ತು ಎಸ್ಐಟಿ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.
ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಆ ವಿಚಾರದಲ್ಲಿ ಅವರ ಅಭಿಪ್ರಾಯ ಹೇಳಿದ್ದಾರೆ. ಧರ್ಮಸ್ಥಳ ವಿಚಾರ ರಾಜಕೀಯ ಆಗಬಾರದು. ಯಾರೂ ಕೂಡ ರಾಜಕೀಯ ಮಾಡಬಾರದು ಎಂದು ಮತ್ತೆ ಒತ್ತಿ ಹೇಳಿದರು.ಶವ ಶೋಧ ಸ್ಥಗಿತ ಸುಳಿವು:
ಧರ್ಮಸ್ಥಳದಲ್ಲಿ ಮತ್ತೆ ಶವಗಳಿಗೆ ಶೋಧ ಕಾರ್ಯದ ಬಗ್ಗೆ ಎಸ್‌ಐಟಿ ತೀರ್ಮಾನ ಮಾಡುತ್ತೆ, ಅವನು ಹೇಳಿಕೊಂಡು ಹೋಗ್ತಾನೆ ಇರ್ತಾನೆ ಇವರು ಅಗೀತಾನೆ ಇರ್ತಾರೆ. ಆ ರೀತಿ ಆಗಲ್ಲ ಎನ್ನುವ ಮೂಲಕ ಶವ ಶೋಧ ಕಾರ್ಯಕ್ಕೆ ಸ್ಥಗಿತದ ಸುಳಿವನ್ನುಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.ಎಲ್ಲೋ ಒಂದು ಕಡೆ ಅಂತ್ಯ ಆಗುತ್ತೆ? ಅನ್ನೋ ದಾಟಿಯಲ್ಲಿ ಶವಗಳ ಶೋಧ ಕಾರ್ಯಕ್ಕೆ ಫುಲ್‌ಸ್ಟಾಪ್ ಇಡೋ ಬಗ್ಗೆ ಗೃಹ ಸಚಿವರ ಸುಳಿವು ಇತ್ತು.
ಸಚಿವರೊಂದಿಗೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್. ನಂಜುಂಡಪ್ರಸಾದ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಬಿ.ರಾಜಶೇಖರ್ ಇದ್ದರು.............
ಒಳ ಮೀಸಲಾತಿ ಜಾರಿಗೆ ಬದ್ಧ: ಡಾ.ಜಿ.ಪರಮೇಶ್ವರ್ಗುಂಡ್ಲುಪೇಟೆ: ಬರುವ ಆ. 19ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದ್ದು, ಯಾವ ರೀತಿ ಅನುಷ್ಠಾನ ಮಾಡಬೇಕು ಎಂಬುದನ್ನು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.ಪತ್ರಕರ್ತರೊಂದಿಗೆ ಮಾತನಾಡಿ, ಒಳ ಮೀಸಲಾತಿ ವಿಚಾರದಲ್ಲಿ ಪರ, ವಿರೋಧ ಇದ್ದೇ ಇರುತ್ತೆ. ಅನ್ಯಾಯ ಆಗಿದ್ರೆ ಹೇಳೋದರಲ್ಲಿ ತಪ್ಪೇನು ಇಲ್ಲ. ಸರ್ಕಾರ ಅನ್ಯಾಯವನ್ನು ಸರಿಪಡಿಸುವ ಕೆಲಸ ಮಾಡುತ್ತೆ. ಜೊತೆಗೆ ಒಳ ಮೀಸಲಾತಿ ಜಾರಿಗೆ ಸರ್ಕಾರ ತರುತ್ತೇ ಎಂದರು.
ಪಿಎಸ್‌ಐ ನೇಮಕದಲ್ಲಿ ಅಕ್ರಮ ಸಾಬೀತು!ರಾಜ್ಯದಲ್ಲಿ ಪಿಎಸ್ಐ ನೇಮಕಾತಿ ವಿಚಾರದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಗರಣ ನಡೆದು 545 ಪಿಎಸ್ಐಗಳ ನೇಮಕ ಅಕ್ರಮ ಸಾಬೀತಾಗಿತ್ತು. ಕಳೆದ ಐದಾರು ವರ್ಷಗಳಿಂದ ನೇಮಕಾತಿ ನಿಂತಿತ್ತು. ಪ್ರಸ್ತುತ ಸಾವಿರಾರು ಪಿಎಸ್ಐ ಹುದ್ದೆಗಳು ಖಾಲಿ ಇವೆ. ಈಗ 545 ಜನಕ್ಕೆ ನೇಮಕಾತಿ ಆದೇಶ ಕೊಟ್ಟಿದ್ದೇವೆ. ಅವರೆಲ್ಲ ತರಬೇತಿ ಪಡೆಯುತ್ತಿದ್ದಾರೆ. 402 ಮಂದಿಗೆ ಮೆಡಿಕಲ್ ಟೆಸ್ಟ್ ನಡೆಯುತ್ತಿದೆ. 15 ದಿನದಲ್ಲಿ ಅವರಿಗೆ ಆದೇಶ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.೧೭ಜಿಪಿಟಿ೧ಗುಂಡ್ಲುಪೇಟೆ ಪ್ರವಾಸಿ ಮಂದಿರದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್.ನಂಜುಂಡಪ್ರಸಾದ್ ಸನ್ಮಾನಿಸಿದರು.