ಸಾರಾಂಶ
ಕಾಂತರಾಜು ವರದಿ ಜಾತಿ ಗಣತಿ ಸಮೀಕ್ಷೆಯಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ವರದಿಯಾಗಿದ್ದು, ಇದರಿಂದ ಯಾರಿಗೂ ನಷ್ಟವಾಗುವುದಿಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
ಕೊಪ್ಪಳ: ಕಾಂತರಾಜು ವರದಿ ಜಾತಿ ಗಣತಿ ಸಮೀಕ್ಷೆಯಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ವರದಿಯಾಗಿದ್ದು, ಇದರಿಂದ ಯಾರಿಗೂ ನಷ್ಟವಾಗುವುದಿಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರದಿಯಿಂದ ಆರ್ಥಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಲಿದೆ ಎಂದರು.
2024ರಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಬಲ್ಡೋಟಾ ಕಂಪನಿಗೆ ಅನುಮತಿ ಸಿಕ್ಕಿದೆ. ಅದನ್ನೇ ಈಗ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿಗಳು ಕಾರ್ಖಾನೆ ಕಾಮಗಾರಿ ಆರಂಭಿಸದಂತೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ಆದರೂ ಈ ಕುರಿತು ಮತ್ತೊಮ್ಮೆ ಸಿಎಂ ಭೇಟಿ ಮಾಡಲಾಗುವುದು ಎಂದ ಹಿಟ್ನಾಳ, ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡಿಲ್ಲ ಎಂಬ ನಂಬಿಕೆ ಇದೆ. ಜನರು ಹಾಗು ಗವಿಸಿದ್ಧೇಶ್ವರ ಶ್ರೀಗಳು ಕಾರ್ಖಾನೆ ಬೇಡವೆಂದು ಹೇಳಿದ್ದರಿಂದ ಸಮಸ್ಯೆಯಾಗದು ಎಂದರು.
ಡಿಸೆಂಬರ್ ಅಂತ್ಯಕ್ಕೆ ಅತೀ ಹೆಚ್ಚು ದಿನ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದವರಲ್ಲಿ ಸಿದ್ದರಾಮಯ್ಯ ಮೊದಲಿಗ ಆಗಲಿದ್ದಾರೆ. ಆದಾದ ನಂತರವೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದರು.
ಸಚಿವ ಸಂಪುಟ ಪುನರ್ ರಚನೆಯ ಬಗ್ಗೆ ನನಗೆ ಮಾಹಿತಿ ಇಲ್ಲ. ನನಗೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್‌ಗೆ ಬಿಟ್ಟಿರುವ ವಿಷಯ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು ರಾಜ್ಯವೇ ಭ್ರಷ್ಟಾಚಾರದಲ್ಲಿಯೇ ನಂ. 1 ಎಂದು ಹೇಳಿದಾಗ ನಾನು ಇರಲಿಲ್ಲ. ಅವರು ಹಾಗೆ ಹೇಳಿಲ್ಲ, ಭ್ರಷ್ಟಾಚಾರ ಆಗಬಾರದು ಎಂದಿದ್ದಾರೆ ಎಂದರು.
;Resize=(128,128))
;Resize=(128,128))
;Resize=(128,128))
;Resize=(128,128))