ಸಾರಾಂಶ
ದಸರಾ ಜಂಬೂಸವಾರಿ ಮೆರವಣಿಗೆ ಹಾಗೂ ಪಂಜಿನ ಕವಾಯತು ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಹಲವು ನಿಯಮಗಳನ್ನು ಜಾರಿ ಮಾಡಿದೆ. ಕಾರ್ಯಕ್ರಮಕ್ಕೆ ಬರುವವರು ನಿಗದಿತ ಸ್ಥಳದಲ್ಲೇ ತಮ್ಮ ವಾಹನಗಳನ್ನು ಪಾರ್ಕ್ ಮಾಡಬೇಕು.
ಕನ್ನಡಪ್ರಭ ವಾರ್ತೆ ಮೈಸೂರು
ಈ ಬಾರಿ ಕಡ್ಡಾಯವಾಗಿ ದಸರಾ ಜಂಬೂಸವಾರಿ ಹಾಗೂ ಪಂಜಿನ ಕವಾಯಿತು ಕಾರ್ಯಕ್ರಮಕ್ಕೆ ನಿಗದಿತ ಪಾಸ್ ಇರುವವರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಪಾಸ್ ಇಲ್ಲದವರಿಗೆ ಪ್ರವೇಶವಿಲ್ಲ ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದ್ದಾರೆ.ದಸರಾ ಜಂಬೂಸವಾರಿ ಮೆರವಣಿಗೆ ಹಾಗೂ ಪಂಜಿನ ಕವಾಯತು ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಹಲವು ನಿಯಮಗಳನ್ನು ಜಾರಿ ಮಾಡಿದೆ. ಕಾರ್ಯಕ್ರಮಕ್ಕೆ ಬರುವವರು ನಿಗದಿತ ಸ್ಥಳದಲ್ಲೇ ತಮ್ಮ ವಾಹನಗಳನ್ನು ಪಾರ್ಕ್ ಮಾಡಬೇಕು ಎಂದು ಅವರು ಸೂಚಿಸಿದ್ದಾರೆ.
ಜಂಬೂಸವಾರಿ ಸಾಗುವ ರಸ್ತೆಯಲ್ಲಿ ಹಲವು ಶಿಥಿಲಗೊಂಡ ಕಟ್ಟಡಗಳಿದ್ದು, ಈ ಬಾರಿ ಆ ಕಟ್ಟಡಗಳ ಮೇಲೆ ಕುಳಿತು ಮೆರವಣಿಗೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಯಾರು ಕಟ್ಟಡಗಳ ಮೇಲೆ ಹತ್ತಬಾರದು. ಉಳಿದಂತೆ ಭದ್ರತೆಗೆ ನಿಯೋಜನೆಗೊಂಡ ಪೊಲೀಸರು ನೀಡುವ ಸಲಹೆ ಸೂಚನೆಯನ್ನು ತಪ್ಪದೆ ಪಾಲಿಸಬೇಕು ಎಂದು ಅವರು ತಿಳಿಸಿದ್ದಾರೆ.ಇದು ಇತ್ತೀಚೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ದುರ್ಘಟನೆ ಹಾಗೂ ನಟ ವಿಜಯ್ ಕರೂರು ರ್ಯಾಲಿಯಲ್ಲಿ ನಡೆದ ಅವಘಡಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಸಾರ್ವಜನಿಕರ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ದಸರಾಗೆ ಬಿಗಿ ಭದ್ರತೆದಸರಾ ಮಹೋತ್ಸವ ಭದ್ರತೆಗಾಗಿ 6384 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಎಸ್ಆರ್ ಪಿ 35 ತುಕಡಿ, ಸಿಎಆರ್, ಡಿಎಆರ್ 15 ತುಕಡಿ, ಎಎಸ್ಸಿ ತಂಡ 29, ಗರುಡ ಫೋರ್ಸ್ 1, ಆರ್ ಎಎಫ್ ಪಡೆ 1, ಗೃಹರಕ್ಷಕರು 1200 ಸಿಬ್ಬಂದಿಯನ್ನು ಭದ್ರತೆ ಬಳಸಿಕೊಳ್ಳಲಾಗಿದೆ.
- ಸೀಮಾ ಲಾಟ್ಕರ್, ನಗರ ಪೊಲೀಸ್ ಆಯುಕ್ತೆಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯಕನ್ನಡಪ್ರಭ ವಾರ್ತೆ ಮೈಸೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅ.1ರ ಮಧ್ಯಾಹ್ನ 3.25ಕ್ಕೆ ವಿಶೇಷ ವಿಮಾನ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡುವರು. ಅ.2ರ ಬೆಳಗ್ಗೆ 8.30ಕ್ಕೆ ಗಾಂಧಿ ಚೌಕದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜನ್ಮದಿನದ ಅಂಗವಾಗಿ ಅವರ ಪ್ರತಿಮೆಗೆ ಗೌರವ ಸಮರ್ಪಣೆಯ ಸಮಾರಂಭದಲ್ಲಿ ಭಾಗವಹಿಸುವರು. ಬೆಳಗ್ಗೆ 9ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡುವರು. ಮಧ್ಯಾಹ್ನ 1ಕ್ಕೆ ಅರಮನೆ ಬಲರಾಮ ದ್ವಾರದಲ್ಲಿ ದಸರಾ ಜಂಬೂಸವಾರಿಯ ನಂದಿಧ್ವಜ ಪೂಜೆಯಲ್ಲಿ ಪಾಲ್ಗೊಳ್ಳುವರು. ಸಂಜೆ 4.42ಕ್ಕೆ ಅರಮನೆ ಆವರಣದಲ್ಲಿ ಅಂಬಾರಿಗೆ ಪುಷ್ಪಾರ್ಚನೆ ಮಾಡುವರು. ಸಂಜೆ 7ಕ್ಕೆ ಬನ್ನಿಮಂಟಪ ಕವಾಯಿತು ಮೈದಾನದಲ್ಲಿ ಆಯೋಜಿಸಲಾಗಿರುವ ಪಂಜಿನ ಕವಾಯಿತಿನಲ್ಲಿ ರಾಜ್ಯಪಾಲರೊಂದಿಗೆ ಭಾಗವಹಿಸುವರು. ಮೈಸೂರಿನಲ್ಲಿ ವಾಸ್ತವ್ಯ ಹೂಡುವ ಅವರು, ಅ.3ರ ಬೆಳಗ್ಗೆ 11ಕ್ಕೆ ಮೈಸೂರಿನಿಂದ ನಿರ್ಗಮಿಸುವರು.