ಪರೀಕ್ಷೆಗೆ ವಿದ್ಯಾರ್ಥಿಗಳ ಮೇಲೆ ಒತ್ತಡ ಬೇಡ: ಜಿಲ್ಲಾಧಿಕಾರಿ ಡಾ.ಕುಮಾರ

| Published : Feb 21 2024, 02:00 AM IST

ಪರೀಕ್ಷೆಗೆ ವಿದ್ಯಾರ್ಥಿಗಳ ಮೇಲೆ ಒತ್ತಡ ಬೇಡ: ಜಿಲ್ಲಾಧಿಕಾರಿ ಡಾ.ಕುಮಾರ
Share this Article
  • FB
  • TW
  • Linkdin
  • Email

ಸಾರಾಂಶ

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಸಿದ್ಧವಾಗಿದ್ದು ಜಿಲ್ಲೆಯಲ್ಲಿ ೨೬ ಪರೀಕ್ಷೆ ಕೇಂದ್ರಗಳಲ್ಲಿ ಒಟ್ಟಾರೆ ೧೪,೧೨೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆಎ ಸಿ.ಸಿ.ಟಿ.ವಿ ಅಳವಡಿಸಿ ಹಾಗೂ ಪರೀಕ್ಷೆ ವೇಳೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ಪೋಷಕರು ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕದೆ ದೈರ್ಯವಾಗಿ ಪರೀಕ್ಷೆ ಬರೆಯುವಂತೆ ಸಜ್ಜುಗೊಳಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಸಿದ್ಧತೆ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಪರೀಕ್ಷೆಗಳಲ್ಲಿ ಪರೀಕ್ಷಾ ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸುವುದು. ಪರೀಕ್ಷಾ ಅಕ್ರಮಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಡುವುದು. ವಿದ್ಯಾರ್ಥಿಗಳು ನಕಲು ಚೀಟಿ ಬಳಕೆಗೆ ಅವಕಾಶ ಮಾಡಿಕೊಡದಂತೆ ಸ್ವಂತವಾಗಿ ಪರೀಕ್ಷೆ ಬರೆಯಲು ತಯಾರುಗೊಳಿಸುವಂತೆ ಸೂಚಿಸಿದರು.

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಸಿದ್ಧವಾಗಿದ್ದು ಜಿಲ್ಲೆಯಲ್ಲಿ ೨೬ ಪರೀಕ್ಷೆ ಕೇಂದ್ರಗಳಲ್ಲಿ ಒಟ್ಟಾರೆ ೧೪,೧೨೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆಎ ಸಿ.ಸಿ.ಟಿ.ವಿ ಅಳವಡಿಸಿ ಹಾಗೂ ಪರೀಕ್ಷೆ ವೇಳೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಫಲಿತಾಂಶವನ್ನು ಉತ್ತಮಪಡಿಸಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿಶೇಷ ತರಗತಿಗಳು, ಗುಂಪು ಅಧ್ಯಯನ, ಕಡಿಮೆ ಅಂಕ ಪಡೆದಿರುವ ಮಕ್ಕಳಿಗೆ ಪುನರಾವರ್ತನೆ, ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವುದು, ಹೆಚ್ಚುವರಿ ತರಗತಿಗಳನ್ನು ತೆಗೆದುಕೊಳ್ಳುವುದು, ಪೂರ್ವಭಾವಿ ಪರೀಕ್ಷೆ ನಡೆಸುವುದು. ಹೀಗೆ ವಿವಿಧ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಿ ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಮಾತನಾಡಿ, ಕಳೆದ ಬಾರಿ ಕಡಿಮೆ ಫಲಿತಾಂಶ ಬಂದಂತಹ ಶಾಲಾ-ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಹೆಚ್ಚು ಗಮನ ಹರಿಸಿ ಪರೀಕ್ಷೆಗೆ ತಯಾರಿ ಮಾಡಬೇಕು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರಲ್ಲದೆ, ಮಾ.೨೫ರಿಂದ ಎಸ್ಸೆಎಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಉತ್ತಮ ಫಲಿತಾಂಶ ಪಡೆಯಲು ಅಧ್ಯಯನ ನಡೆಸುವ ಬಗ್ಗೆ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಎದುರಿಸುವ ರೀತಿ ತಯಾರುಗೊಳಿಸುವಂತೆ ಹೇಳಿದರು.

ಸಭೆಯಲ್ಲಿ ಎಎಸ್‌ಪಿ ತಿಮ್ಮಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಶಿವರಾಮೇಗೌಡ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ಚೆಲುವಯ್ಯ ಹಾಗೂ ಇತರರಿದ್ದರು.