ಕುಂಕುಮ ಹಚ್ಚಿಕೊಂಡು ಉದ್ಘಾಟಿಸಿದರೆ ಅಭ್ಯಂತರವಿಲ್ಲ

| Published : Aug 30 2025, 01:01 AM IST

ಕುಂಕುಮ ಹಚ್ಚಿಕೊಂಡು ಉದ್ಘಾಟಿಸಿದರೆ ಅಭ್ಯಂತರವಿಲ್ಲ
Share this Article
  • FB
  • TW
  • Linkdin
  • Email

ಸಾರಾಂಶ

ಭಾನು ಮುಷ್ತಾಕ್ ಅವರಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಬಂದಿದೆ. ಹಾಗಂತ ಮೈಸೂರು ದಸರಾ ಉದ್ಘಾಟನೆ ಅವಕಾಶ ಕೊಡಬೇಕಿತ್ತಾ

ಹುಬ್ಬಳ್ಳಿ: ಸಾಹಿತಿ ಭಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆಗೆ ಬರುವಾಗ ಮಡಿ ಸೀರೆಯುಟ್ಟು, ಹಣೆಗೆ ಅರಿಶಿಣ, ಕುಂಕುಮ ಹಚ್ಚಿ ಬರಬೇಕು. ಈ ಮೂಲಕ ದಸರಾ ಸಂಪ್ರದಾಯಕ್ಕೆ ಗೌರವ ಕೊಡಬೇಕು. ಹೀಗೆ ಮಾಡಿದರೆ ನಮಗೆ ಅಭ್ಯಂತರವಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.

ಇಲ್ಲಿನ ರಾಣಿ ಚೆನ್ನಮ್ಮ ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಭಾನು ಮುಷ್ತಾಕ್ ಅವರಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಬಂದಿದೆ. ಹಾಗಂತ ಮೈಸೂರು ದಸರಾ ಉದ್ಘಾಟನೆ ಅವಕಾಶ ಕೊಡಬೇಕಿತ್ತಾ? ಡಿ.ಕೆ.ಶಿವಕುಮಾರ್ ಅವರನ್ನು ಅಧಿಕಾರದಿಂದ ದೂರವಿಡಲು ಸಿದ್ದರಾಮಯ್ಯ ಹೂಡಿರುವ ತಂತ್ರಗಾರಿಕೆ ಇದು. ಇದನ್ನು ಡಿಕೆಶಿ ಅರಿತುಕೊಳ್ಳಬೇಕು ಎಂದರು.

ಆದರೆ, ನಿಮ್ಮ (ಭಾನು ಮುಷ್ತಾಕ) ಮನಸ್ಸಾದ್ರೂ ಹೇಗೆ ಒಪ್ಪಿತು? ನಾವು ಪೂಜಿಸುವ ಕಾವೇರಿ ನೀರು ಕುಡಿಯಬೇಕಾದರೆ ಏನು ಅನಿಸುವುದಿಲ್ಲವೇ? ನದಿಯನ್ನು ಕೂಡ ನಾವು ದೇವಿಯನ್ನಾಗಿ ಮಾಡಿದ್ದೇವೆ. ಮುಸಲ್ಮಾನರು ನೀವು ನದಿ ನೀರು ಕುಡಿಯಲ್ವಾ? ನೀವೇನು ಸಾಹಿತಿಗಳೋ, ನಾಟಕಕಾರರೋ? ಹಿಂದುಗಳು ಇಫ್ತಾರ್ ಕೂಟಕ್ಕೆ ಹೋಗುವವರಿಗೆ ಟೋಪಿ ಹಾಕುತ್ತೀರಿ ಎಂದರು.

ಹಿಂದೂಗಳಲ್ಲಿ ಹೆಣ್ಣನ್ನು ದೇವಿ ಸ್ಪರೂಪವಾಗಿ ನೋಡಲಾಗುತ್ತದೆ. ಹೀಗಾಗಿಯೇ ದೇಶಕ್ಕೆ ಭಾರತ ಮಾತೆ, ಕರ್ನಾಟಕಕ್ಕೆ ಕನ್ನಡಾಂಬೆ ಎಂದು ಕರೆಯುತ್ತೇವೆ. ನಮ್ಮ ಸಂಸ್ಕೃತಿ ಬಗ್ಗೆ ಭಾನು ಮುಷ್ತಾಕ್ ಅಸಡ್ಡೆ ಮಾಡುತ್ತಾರೆ. ನಮ್ಮ ಬಗ್ಗೆ ತಾತ್ಸಾರ ಇಟ್ಟುಕೊಂಡು ನಮ್ಮ ಬೆಟ್ಟಕ್ಕೆ ಹೇಗೆ ಬರುತ್ತಿರಿ? ನೀವು ಹಿಂದೆ ಸಮ್ಮೇಳನದಲ್ಲಿ ಕನ್ನಡದಾಂಬೆಗೆ ಕುಂಕುಮವಿಟ್ಟು, ಸೀರೆ ತೋಡಿಸಿ ಕರ್ನಾಟಕದಿಂದ ಮುಸ್ಲಿಂರನ್ನೇ ಹೊರಗಿಟ್ಟಿದೀರಿ ಎಂದು ಹೇಳಿದ್ದೀರಿ. ಇದೀಗ ಅದೇ ಚಾಮುಂಡೇಶ್ವರಿ ಉತ್ಸವಕ್ಕೆ ಚಾಲನೆ ನೀಡಲು ನಿಮಗೆ ಮನಸ್ಸಾದರೂ ಹೇಗಾಯಿತು?. ನೀವು ಸೀರೆ ಮಡಿಯುಟ್ಟು ಬಂದರೆ ನಮಗೆ ಅಭ್ಯಂತರವಿಲ್ಲ ಎಂದರು.

ರಾಜ್ಯದಲ್ಲಿ ತಾಲಿಬಾನಿ ಸರ್ಕಾರ

ಈ ಹಿಂದೆ ದೇಶದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಲು, ಜನರಲ್ಲಿ ಹೋರಾಟದ ಕಿಚ್ಚು ಹಚ್ಚಲು ಗಣೇಶೋತ್ಸವ ಆರಂಭಿಸಲಾಯಿತು. ಬಾಲ ಗಂಗಾಧರ ತಿಲಕ ಮೊದಲು ಶಿವಾಜಿ ಮಹಾರಾಜರ ಜಯಂತಿ ಆರಂಭಿಸಿದರು. ದೇವರ ಕೊಣೆಗೆ ಸೀಮಿತವಾಗಿದ್ದ ಗಣೇಶ ಸಾರ್ವಜನಿಕ ಉತ್ಸವ ನಡೆಯಿತು. 66 ಸಾವಿರ ಜನ 32 ಕೋಟಿ ಜನರ ಮೇಲೆ ಆಡಳಿತ ಮಾಡಿದರು. ಪುಕ್ಕಲು ಹಿಂದೂಗಳೇ ನಮ್ಮವರಿಗೇ ಗುಂಡು ಹೊಡೆದರು. ಭಾರತೀಯರನ್ನು ಇಟ್ಟುಕೊಂಡು ಭಾರತೀಯರ ಮೇಲೆ ಆಡಳಿತ ಮಾಡಿದರು. ಈಗ ಭಾರತದಲ್ಲಿದ್ದುಕೊಂಡೆ ಭಾರತದ ಗಡಿಯಾಚೆ ನಿಷ್ಠೆ ಹೊಂದಿರುವವರ ಬಗ್ಗೆ ಆಲೋಚಿಸುವವರ ಸಂಖ್ಯೆ ಹೆಚ್ಚಿದೆ.

ಹುಬ್ಬಳ್ಳಿಯಲ್ಲಿ ನಡೆದ ಗಲಾಭೆ ಪ್ರಕರಣದಲ್ಲಿ ಮುಸ್ಲಿಮರ ಮೇಲಿನ ಕೇಸ್‌ ವಾಪಸ್ ಪಡೆಯಲು ಯತ್ನಿಸಿದರು. ಕೆಜೆಹಳ್ಳಿ, ಡಿಜೆ.ಹಳ್ಳಿ ಗಲಭೆ ಕೇಸ್ ವಾಪಸ್ ಪಡೆದರು. ದೇಶದೊಳಗೆ ಇರುವ ದೇಶದ್ರೋಹಿ ಶಕ್ತಿಗಳ ವಿರುದ್ಧ ನಾವು ಹೊರಡಬೇಕಿದೆ. ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರವಿದೆ. ಗೌಡ, ಒಕ್ಕಲಿಗ, ಬ್ರಾಹ್ಮಣ, ಎಸ್ಸಿ, ಎಸ್ಟಿ ಎನ್ನುವ ಬದಲು ನಾವು ಹಿಂದೂಗಳು ಎಂದು ಹೇಳಿಕೊಳ್ಳುತ್ತೇವೆಯೋ ಅಂದು ಯಾರನ್ನೂ ಬೇಡುವ ಪರಿಸ್ಥಿತಿ ಬರಲ್ಲ ಎಂದರು.