ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಲ್ಲ: ಶಾಸಕ ಶ್ರೀನಿವಾಸ್

| Published : Jun 29 2025, 01:32 AM IST

ಸಾರಾಂಶ

ಕಳೆದ ಐದು ದಿನಗಳ ಹಿಂದೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೇಮಾವತಿ ಹೋರಾಟ ವಿಚಾರ ಪ್ರಸ್ತಾಪಿಸಿದ್ದೇನೆ. ಉಪ ಮುಖ್ಯಮಂತ್ರಿಗಳಿಗೆ ಇಲ್ಲಿನ ವಾಸ್ತವ ಚಿತ್ರಣವನ್ನು ತಾಲೂಕಿಗೆ ಬಂದಾಗ ವಿವರಿಸಿದ್ದೇನೆ. ಒಮ್ಮತದ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಗುಬ್ಬಿ

ನಾನು ಪಕ್ಷದ ಚೌಕಟ್ಟಿನಲ್ಲಿ ಅಷ್ಟೇ ಮಾತನಾಡುತ್ತೇನೆ, ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಲಾರೆ, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ಮಾತನಾಡುವ ಮಟ್ಟಕ್ಕೆ ನಾನಿಲ್ಲ, ಪಕ್ಷ ಹೇಳಿದ್ದಷ್ಟೇ ಕೆಲಸ ಮಾಡುತ್ತೇನೆ ಎಂದು ಶಾಸಕ ಎಸ್ .ಆರ್ .ಶ್ರೀನಿವಾಸ್ ತಿಳಿಸಿದರು.

ತಾಲೂಕಿನ ಎಂ.ಎಚ್.ಪಟ್ಟಣ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 7 ಕೋಟಿ ರು. ಅನುದಾನದಲ್ಲಿ ಮಣ್ಣಮ್ಮದೇವಿ ದೇವಸ್ಥಾನದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ, ಕಳೆದ ಐದು ದಿನಗಳ ಹಿಂದೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೇಮಾವತಿ ಹೋರಾಟ ವಿಚಾರ ಪ್ರಸ್ತಾಪಿಸಿದ್ದೇನೆ. ಉಪ ಮುಖ್ಯಮಂತ್ರಿಗಳಿಗೆ ಇಲ್ಲಿನ ವಾಸ್ತವ ಚಿತ್ರಣವನ್ನು ತಾಲೂಕಿಗೆ ಬಂದಾಗ ವಿವರಿಸಿದ್ದೇನೆ. ಒಮ್ಮತದ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದಾರೆ, ಹಾಗಲವಾಡಿ ಕೆರೆಗೆ ನೀರು ಹರಿಸುವ ಕಾಮಗಾರಿ ಸಹ ಅಂತಿಮ ಸ್ವರೂಪದಲ್ಲಿದೆ. ಬಿಕ್ಕೇಗುಡ್ಡ ಕುಡಿಯುವ ನೀರಿನ ಯೋಜನೆ ಶೇ.80 ರಷ್ಟು ಕೆಲಸ ಮುಗಿದಿದ್ದು, ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಭರವಸೆ ನೀಡಿದರು. ಬಗರ್ ಹುಕುಂ ಸಮಿತಿ ಸದಸ್ಯ ನರಸಿಂಹಯ್ಯ, ಗ್ರಾಪಂ ಅಧ್ಯಕ್ಷ ಯೋಗೀಶ್, ಉಪಾಧ್ಯಕ್ಷೆ ಭಾಗ್ಯಮ್ಮ, ಸದಸ್ಯರಾದ ನಾಗೇಶ್, ರಾಮಕ್ಕ, ಬೋರಯ್ಯ, ಹನುಮಕ್ಕ, ಅನಿತಾ, ಗೌಡಣ್ಣ, ನೇಮರಾಜ್, ಲೋಕೋಪಯೋಗಿ ಇಲಾಖೆ ಎಇಇ ಯೋಗೀಶ್, ಗುತ್ತಿಗೆದಾರ ಅಶೋಕ್‌, ಪಿಡಿಒ ಶೇಖರ್ ಇತರರು ಇದ್ದರು.