ಪ್ರಸ್ತುತ ಹೆಚ್ಚಿನ ಯುವಕರು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಅವರು ತಮ್ಮ ಶೈಕ್ಷಣಿಕ ಹಿನ್ನೆಡೆ, ಮಾನಸಿಕ, ದೈಹಿಕ ಆರೋಗ್ಯವನ್ನು ಕಳೆದು ಕೊಂಡು ತಮ್ಮತನ ಕಳೆದುಕೊಳ್ಳುತ್ತಿದ್ದಾರೆ ಎಂದು ಪಿಎಸ್ಐ ರಾಹುಲ್ ಪವಾಡೆ ಹೇಳಿದರು.
ಕನ್ನಡಪ್ರಭ ವಾರ್ತೆ ಹುಣಸಗಿ
ಪ್ರಸ್ತುತ ಹೆಚ್ಚಿನ ಯುವಕರು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಅವರು ತಮ್ಮ ಶೈಕ್ಷಣಿಕ ಹಿನ್ನೆಡೆ, ಮಾನಸಿಕ, ದೈಹಿಕ ಆರೋಗ್ಯವನ್ನು ಕಳೆದು ಕೊಂಡು ತಮ್ಮತನ ಕಳೆದುಕೊಳ್ಳುತ್ತಿದ್ದಾರೆ ಎಂದು ಪಿಎಸ್ಐ ರಾಹುಲ್ ಪವಾಡೆ ಹೇಳಿದರು.ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಕರ್ನಾಟಕ ಸರ್ಕಾರದ ಡ್ರಗ್ಸ್ ಬೇಡ ಬ್ರೋ ಹಾಗೂ ರೈಸ್ (RISE) ಕಾರ್ಯಕ್ರಮದ ನಿಮಿತ್ತ ಹುಣಸಗಿ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಿ ಚಿತ್ರಕಲೆ,ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, ಅವುಗಳನ್ನು ತಡೆ ಗಟ್ಟುವ ಕ್ರಮಗಳು ಹಾಗೂ ವ್ಯಸನದಿಂದ ಚೇತರಿಸಿಕೊಳ್ಳುವ ಮಾರ್ಗಗಳ ಕುರಿತು ಅರಿವು ಮೂಡಿಸಲಾಯಿತು. ಯುವಜನರು ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂಬ ಸಂದೇಶವನ್ನು ವಿದ್ಯಾರ್ಥಿಗಳಲ್ಲಿ ನೀಡಲಾಯಿತು.
ಮಾದಕ ದ್ರವ್ಯ ಸೇವೆನೆಯ ವ್ಯಸನಿಗಳ ಸಂಖ್ಯೆ ಸಹ ವಿಪರೀತ ತಲುಪಿದೆ. ಇದು ಸಮಾಜದ ಮತ್ತು ದೇಶದ ಬೆಳಬಣಿಗೆಗೆ ಮಾರಕವಾಗಿದೆ. ಹಾಗಾಗಿ ಮಾದಕ ದ್ರವ್ಯಗಳ ಸೇವನೆಯ ವಿರುದ್ಧ ಯುವಕರಲ್ಲಿ ಜಾಗೃತಿ ಮೂಡಿಸಬೇಕು. ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಸರಕಾರಿ ಬಾಲಕಿಯರ ಪ್ರೌಢಶಾಲೆ, ಸರಕಾರಿ ಬಾಲಕರ ಪ್ರೌಢಶಾಲೆ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವ್ಯಸನ ಮುಕ್ತ ಸಮಾಜದನಿರ್ಮಾಣಕ್ಕೆ ಕಿವಿಮಾತು
ಪಟ್ಟಣದ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಸರ್ಕಾರಿ ಬಾಲಕರ ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಧಿಕಾರಿಗಳು ಮತ್ತು ಉಪನ್ಯಾಸಕ ಸಿಬ್ಬಂದಿ ಪ್ರಶಂಸೆ ವ್ಯಕ್ತಪಡಿಸಲಾಯಿತು. ಮಾದಕದ್ರವ್ಯಗಳ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಸಮುದಾಯದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಪಿಎಸ್ಐ ರಾಹುಲ್ ಪವಾಡೆ ಹೇಳಿದರು.