ಆರ್‌ಆರ್‌.ನಗರದ 13 ಶುದ್ಧ ಘಟಕದಲ್ಲಿ ಈಗಲೇ ನೀರಿಲ್ಲ: ನೀರಿನ ಪರ್ಯಾಯ ವ್ಯವಸ್ಥೆಗೆ ತುಷಾರ್‌ ಸೂಚನೆ

| Published : Feb 15 2024, 01:36 AM IST / Updated: Feb 15 2024, 04:53 PM IST

Tushar
ಆರ್‌ಆರ್‌.ನಗರದ 13 ಶುದ್ಧ ಘಟಕದಲ್ಲಿ ಈಗಲೇ ನೀರಿಲ್ಲ: ನೀರಿನ ಪರ್ಯಾಯ ವ್ಯವಸ್ಥೆಗೆ ತುಷಾರ್‌ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ನಗರದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಕಂಡು ಬಂದಿರುವ ನೀರಿನ ಕೊರತೆ ಬಗ್ಗೆ ಪರಿಶೀಲಿಸಿ, ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಕಂಡು ಬಂದಿರುವ ನೀರಿನ ಕೊರತೆ ಬಗ್ಗೆ ಪರಿಶೀಲಿಸಿ, ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌.ಆರ್‌.ನಗರ ವಲಯದಲ್ಲಿ ಒಟ್ಟು 13 ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ನೀರಿನ ಕೊರತೆ ಉಂಟಾಗಿ ಸಮಸ್ಯೆ ಆಗಿರುವ ಹಿನ್ನೆಲೆಯಲ್ಲಿ ನಗರದ ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ನೀರು ಪೂರೈಕೆ ಬಗ್ಗೆ ಪರಿಶೀಲಿಸಲಾಗುವುದು. 

ನೀರಿನ ಕೊರತೆ ಇರುವ ಕಡೆ ಕೊಳವೆ ಬಾವಿ ಪುನಶ್ಚೇತನಗೊಳಿಸುವುದಕ್ಕೆ ಸಾಧ್ಯವಾದರೆ ಮಾಡಲಾಗುವುದು. ಇಲ್ಲವೇ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ನೀರಿನ ಪೂರೈಕೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ನಗರದ ನೀರಿನ ಪೂರೈಕೆಯ ಜವಾಬ್ದಾರಿಯನ್ನು ಜಲಮಂಡಳಿಗೆ ವಹಿಸಿದ್ದು, ಪಾಲಿಕೆಯ ಎಲ್ಲ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರ ಮಾಡಲಾಗಿದೆ. 110 ಹಳ್ಳಿ ವ್ಯಾಪ್ತಿಯಲ್ಲಿ ನೀರು ಪೂರೈಕೆಯ ಜವಾಬ್ದಾರಿಯನ್ನು ಬಿಬಿಎಂಪಿ ನಿರ್ವಹಣೆ ಮಾಡುತ್ತಿದೆ ಎಂದು ಇದೇ ವೇಳೆ ತಿಳಿಸಿದರು.