ಡೆಂಘೀ ನಿಯಂತ್ರಣಕ್ಕೆ ನೋಡಲ್ ಅಧಿಕಾರಿಗಳ ನೇಮಕ

| Published : Jul 13 2024, 01:39 AM IST

ಸಾರಾಂಶ

nodel officers recruitment for dengue cpntrol

ಚಿತ್ರದುರ್ಗ:

ಜಿಲ್ಲೆಯಲ್ಲಿ ಡೆಂಘೀ ಜ್ವರ ಹರಡದಂತೆ ಹಾಗೂ ಸೊಳ್ಳೆಗಳು ಹೆಚ್ಚಾಗದಂತೆ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ತಾಲೂಕಿಗೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಚಳ್ಳಕೆರೆ ತಾಲೂಕಿಗೆ ತಾಂತ್ರಿಕ ಸಹಾಯಕರು ಮತ್ತು ಪದನಿಮಿತ್ತ ಭೂ ದಾಖಲೆಗಳ ಉಪನಿರ್ದೇಶಕ ರಾಮಾಂಜನೇಯ, ಹಿರಿಯೂರು ತಾಲೂಕಿಗೆ ಜಿ.ಪಂ. ಉಪ ಕಾರ್ಯದರ್ಶಿ ತಿಮ್ಮಪ್ಪ, ಹೊಳಲ್ಕೆರೆ ತಾಲೂಕಿಗೆ ಗ್ರಾ.ಕು.ನೀ ಮತ್ತು ನೈ ವಿಭಾಗ ಕಾರ್ಯಪಾಲಕ ಇಂಜಿನಿಯರ್ ಬಸವನಗೌಡ, ಹೊಸದುರ್ಗ ತಾಲೂಕಿಗೆ ಪಂ.ರಾಜ್ ಇಂಜಿನಿಯರ್ ವಿಭಾಗ ಕಾರ್ಯಪಾಲಕ ಅಭಿಯಂತರ ಹನುಮಂತಪ್ಪ ಹಾಗೂ ಮೊಳಕಾಲ್ಮೂರು ತಾಲೂಕಿಗೆ ರೇಷ್ಮೆ ಇಲಾಖೆ ಉಪನಿರ್ದೇಶಕ ಎಂ.ಬಿ.ಬೀರಲದಿನ್ನಿ ಅವರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ. ಜೊತೆಗೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳ ಕಾರ್ಯ ವೈಖರಿ ಪರಿಶೀಲನೆ ಹಾಗೂ ವರದಿಗಳನ್ನು ಕ್ರೋಢಿಕರಣ ಮಾಡಿ ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ವರದಿ ಮಾಡಲು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ.

-----