ಸಾರಾಂಶ
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿಭಾಗದಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ನೊಳಂಬ ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಸೆ.1ರಂದು ಭಾನುವಾರ ಬೆಳಗ್ಗೆ 10.30ಕ್ಕೆ ನೊಳಂಬ ಲಿಂಗಾಯತ ಸಮುದಾಯದ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ನೊಳಂಬ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷ ರಾಂಪುರ ಜಯಣ್ಣ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಅರಸೀಕೆರೆ
ನಗರದ ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಸೆ.1ರಂದು ಭಾನುವಾರ ಬೆಳಗ್ಗೆ 10.30ಕ್ಕೆ ನೊಳಂಬ ಲಿಂಗಾಯತ ಸಮುದಾಯದ ವತಿಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ನೊಳಂಬ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷ ರಾಂಪುರ ಜಯಣ್ಣ ತಿಳಿಸಿದ್ದಾರೆ.ಯಳನಡು ಜ್ಞಾನಪ್ರಭು ಶ್ರೀ ಸಿದ್ದರಾಮದೇಶೀಕೇಂದ್ರ ಸ್ವಾಮೀಜಿ, ಪುಷ್ಪಗಿರಿ ಸಂಸ್ಥಾನದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಕೋಳಗುಂದ ಕೇದಿಗೆ ಮಠದ ಶ್ರೀ ಜಯಚಂದ್ರಶೇಖರ ಸ್ವಾಮೀಜಿ ಆಶೀರ್ವಚನ ನೀಡುವರು. ಕೇಂದ್ರ ಸಮಿತಿ ಅಧ್ಯಕ್ಷ ಬಿಳಿಗೆರೆ ಚಂದ್ರಶೇಖರ್, ಗೌರವ ಕಾರ್ಯದರ್ಶಿ ಕಾಮನಕೆರೆ ಶಶಿಧರ್, ಜಂಟಿ ಕಾರ್ಯದರ್ಶಿಗಳಾದ ಕುಬೇರಪ್ಪ, ಸಿದ್ದರಾಮೇಗೌಡ ಸಿರಿ, ರಾಮಲಿಂಗಪ್ಪ ಸೇರಿದಂತೆ ಕೇಂದ್ರ ಹಾಗೂ ಸ್ಥಳೀಯ ಉಪಸಮಿತಿ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಳ್ಳುವರು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿಭಾಗದಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ನೊಳಂಬ ಲಿಂಗಾಯತ ಸಮುದಾಯದ ಜಿಲ್ಲಾ ವ್ಯಾಪ್ತಿಯ ವಿದ್ಯಾರ್ಥಿಗಳು ಆ.31ರಂದು ಶನಿವಾರ ಸಂಜೆ ವರೆಗೂ ಸಮುದಾಯ ಭವನದ ಕಚೇರಿಗೆ ತೆರಳಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಪೋಟೋ: ರಾಂಪುರ ಜಯಣ್ಣ