ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಜಾಮೀನುರಹಿತ ವಾರೆಂಟ್

| Published : Feb 11 2024, 01:45 AM IST

ಸಾರಾಂಶ

ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿ ದಾಖಲಾಗಿದ್ದ ವಿಚಾರಣೆಗೆ ಗೈರಾಗಿದ್ದ ಕಾರಣಕ್ಕೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಜಾಮೀನುರಹಿತ ವಾರೆಂಟ್ ಜಾರಿ ಮಾಡಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿ ದಾಖಲಾಗಿದ್ದ ವಿಚಾರಣೆಗೆ ಗೈರಾಗಿದ್ದ ಕಾರಣಕ್ಕೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಜಾಮೀನುರಹಿತ ವಾರೆಂಟ್ ಜಾರಿ ಮಾಡಿದೆ.ಅವರ ವಿರುದ್ಧ ಕೊವೀಡ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ಹಾಜರಾಗಲು ಕೋರ್ಟ್‌ನಿಂದ ಸಮನ್ಸ್ ಜಾರಿಯಾದರೂ ರಾಮಲಿಂಗಾರೆಡ್ಡಿ ಅವರು ಗೈರಾಗಿದ್ದರು. ಹೀಗಾಗಿ ಜಾಮೀನು ರಹಿತ ವಾರಂಟ್ ಜಾರಿಗೆ 42 ನೇ ಎಸಿಎಂಎಂ ನ್ಯಾಯಾಧೀಶರಾದ ಜೆ.ಪ್ರೀತ್ ಆದೇಶಿಸಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿರುದ್ಧವೂ ಮೇಕೆದಾಟು ಪಾದಯಾತ್ರೆ ವೇಳೆ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಕೇಸ್‌ ದಾಖಲಾಗಿತ್ತು.