ಮಹದಾಯಿ ಜಾರಿಗೆ ಪಕ್ಷಾತೀತವಾಗಿ ಚರ್ಚಿಸಿ: ಹೂಗಾರ

| Published : Dec 09 2024, 12:46 AM IST

ಸಾರಾಂಶ

ಉದ್ದೇಶ ಪೂರ್ವಕವಾಗಿ ಈ ಯೋಜನೆ ಜಾರಿ ಮಾಡದೇ ಈ ಭಾಗದ ರೈತ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ

ನರಗುಂದ: ಬೆಳಗಾವಿ ಅಧಿವೇಶನದಲ್ಲಿ ಎಲ್ಲ ಶಾಸಕರು ಮಹದಾಯಿ ಯೋಜನೆ ಬಗ್ಗೆ ಪಕ್ಷಾತೀತವಾಗಿ ಚರ್ಚಿಸಿ ಯೋಜನೆ ಜಾರಿಗೆ ಪ್ರಯತ್ನಿಸಬೇಕು ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಆಗ್ರಹಿಸಿದ್ದಾರೆ.

ಅವರು 3430ನೇ ದಿನದ ಮಹಾದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿ, ರಾಜ್ಯದ ಉತ್ತರ ಕರ್ನಾಟಕದ ಭಾಗದ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರು ಕುಡಿಯುವ ನೀರಿಗಾಗಿ ಕಳೆದ 10 ವರ್ಷದಿಂದ ನಿರಂತರ ಬಂಡಾಯ ನೆಲದ ನರಗುಂದದಲ್ಲಿ ಹೋರಾಟ ಮಾಡಿದರೂ ಸರ್ಕಾರಗಳು ಗೋವಾ ಸರ್ಕಾರ ಮಾತು ಕೇಳಿಕೊಂಡು ಉದ್ದೇಶ ಪೂರ್ವಕವಾಗಿ ಈ ಯೋಜನೆ ಜಾರಿ ಮಾಡದೇ ಈ ಭಾಗದ ರೈತ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಸರ್ವ ಪಕ್ಷ ದೆಹಲಿಗೆ ತೆಗೆದುಕೊಂಡು ಹೋಗಿ ಪ್ರಧಾನಿ ನರೇಂದ್ರ ಮೋದಿ ಮೇಲೆ ಒತ್ತಡ ಹಾಕು ನಿರ್ಣಯ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪರಶುರಾಮ ಜಂಬಗಿ, ಎಸ್.ಬಿ. ಜೋಗಣ್ಣವರ, ಸುಭಾಸ ಗಿರಿಯಣ್ಣವರ, ಸಿ.ಎಸ್. ಪಾಟೀಲ, ಹನಮಂತ ಸರನಾಯ್ಕರ, ಶಿವಪ್ಪ ಸಾತಣ್ಣವರ, ಮಲ್ಲೇಶ ಅಣ್ಣಿಗೇರಿ, ಯಲ್ಲಪ್ಪ ಚಲವಣ್ಣವರ, ಶಂಕ್ರಪ್ಪ ಜಾಧವ, ಸೋಮಲಿಂಗಪ್ಪ ಆಯಿಟ್ಟಿ, ಅರ್ಜುನ ಮಾನೆ, ಅನಸವ್ವ ಶಿಂದೆ, ನಾಗರತ್ನ ಸವಳಬಾವಿ, ವಾಸು ಚವ್ಹಾಣ, ಫಕೀರಪ್ಪ ಅಣ್ಣಿಗೇರಿ, ವಿಜಯಕುಮಾರ ಹೂಗಾರ ಸೇರಿದಂತೆ ಇತರರು ಇದ್ದರು.