ಅಭಿವೃದ್ಧಿ ಕಾರ್ಯಗಳಿಗೆ ಪಕ್ಷಾತೀತ ಅನುದಾನ

| Published : Jan 23 2024, 01:46 AM IST

ಸಾರಾಂಶ

ದೇವರಹಿಪ್ಪರಗಿ ತಾಲೂಕಿನ ಆಲಗೂರ ಗ್ರಾಮದಲ್ಲಿ ನಡೆದ ಭೂಮಿಪೂಜೆಯಲ್ಲಿ ಶಾಸಕ ರಾಜುಗೌಡ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಜಲ ಜೀವನ ಮಷಿನ್‌ ಯೋಜನೆ ಹಾಗೂ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.

ತಾಲೂಕಿನ ಆಲಗೂರ ಗ್ರಾಮದಲ್ಲಿ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕಳೆದೆರಡು ಬಾರಿ ವಿಧಾನಸಭಾ ಚುನಾವಣೆಗಳಲ್ಲಿ ಸೋತರು ತಾಲೂಕಿನ ನಿಷ್ಠಾವಂತ ಕಾರ್ಯಕರ್ತರು ನನ್ನ ಕೈಬಿಡದೆ ಪಕ್ಷ ಸಂಘಟನೆಗೆ ಒತ್ತು ನೀಡಿ ಅತ್ಯಧಿಕ ಮತಗಳಿಂದ ಗೆಲ್ಲಿಸಿ ಶಾಸಕನಾಗಿ ಆಯ್ಕೆ ಮಾಡಿದರು. ಅವರ ಪರಿಶ್ರಮಕ್ಕೆ ಅಗೌರವ ಆಗದಂತೆ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಪಕ್ಷಾತೀತ, ಜಾತ್ಯಾತೀತವಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲಾಗುವುದು. ವಿಪಕ್ಷದ ಶಾಸಕನಾಗಿದ್ದರು ಕ್ಷೇತ್ರದ ಪ್ರತಿ ಗ್ರಾಮದ ಸಮಸ್ಯೆಗಳನ್ನು ಮನಗಂಡು ಅಭಿವೃದ್ಧಿ ಹಿತ ದೃಷ್ಟಿಯಿಂದ ಸಂಬಂಧಿಸಿದ ಸಚಿವರು ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಮುಖಂಡರಾದ ಶರಣು ಧರಿ ಮಾತನಾಡಿ, ಶಾಸಕರಾದ ಮೊದಲ ಅವಧಿಯಲ್ಲಿಯೇ ತಾಲೂಕಿನ ಅಭಿವೃದ್ಧಿ ಹಿತದೃಷ್ಟಿಯಿಂದ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಆದ್ಯತೆ ನೀಡಿ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ರಸ್ತೆ, ಸಮುದಾಯ ಭವನ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಶ್ರಮಿಸುತ್ತಿದ್ದಾರೆ. ಗ್ರಾಮಸ್ಥರ ಪರವಾಗಿ ಧನ್ಯವಾದಗಳು ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಪ್ರಮುಖರುಗಳಾದ ಬಸವಂತ್ರಾಯ ಇಮ್ಲಾಪೂರ, ಭೀಮನಗೌಡ ಪಾಟೀಲ, ಮಲ್ಲಣ್ಣ ಸಜ್ಜನ, ಸೈದುಸಾಬ ಮುಜಾವರ, ಕಂಟೆಪ್ಪ ಜನ್ನಪ್ಪ ಗೋಳ, ಮಡಿವಾಳಪ್ಪ ವಾಲಿಕಾರ, ಗ್ರಾಪಂ ಅಧ್ಯಕ್ಷರ ಪ್ರತಿನಿಧಿಗಳಾದ ಮೌನೇಶ ಪೂಜಾರಿ, ಉಪಾಧ್ಯಕ್ಷ ಗೋಪಾಲ ಮಾಕೊಂಡ, ಶಿವಾನಂದ ಕಲಬುರ್ಗಿ, ಮಲ್ಲಿಕಾರ್ಜುನ ಧರಿ, ಇಲಾಖೆ ಅಧಿಕಾರಿಗಳಾದ ಮಲ್ಲಿಕಾರ್ಜುನ ಗುತ್ತಿಗೆದಾರರಾದ ಅಶೋಕ ಸಾಲಿಮಠ, ಬಸವರಾಜ ಇಳಗೇರ ಸೇರಿದಂತೆ ಗ್ರಾಮದ ಪ್ರಮುಖರು ಗಣ್ಯರು ಹಾಗೂ ಯುವಕರು ಉಪಸ್ಥಿತರಿದ್ದರು.