ಮೇಕೆದಾಟು ಯೋಜನೆಗೆ ಪಕ್ಷಾತೀತ ಹೋರಾಟ ಅಗತ್ಯ: ಪಾಪು ಆಗ್ರಹ

| Published : Jul 29 2024, 12:48 AM IST

ಮೇಕೆದಾಟು ಯೋಜನೆಗೆ ಪಕ್ಷಾತೀತ ಹೋರಾಟ ಅಗತ್ಯ: ಪಾಪು ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಮೇಕೆದಾಟು ಯೋಜನೆ ಕುರಿತು ಪ್ರಧಾನಮಂತ್ರಿ ಮೋದಿ ಅವರ ಬಳಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಪಕ್ಷಾತೀತವಾಗಿ ಎಲ್ಲಾ ಪಕ್ಷದ ಸಂಸದರು, ಕೇಂದ್ರ ಸಚಿವರು, ರಾಜ್ಯಸಚಿವರು, ಶಾಸಕರು ಸುದೀರ್ಘವಾಗಿ ಚರ್ಚಿಸಬೇಕು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಮೇಕೆದಾಟು ಯೋಜನೆಗೆ ಅನುಮತಿ ಪಡೆಯಲು ರಾಜ್ಯದ ಮುಖ್ಯಮಂತ್ರಿಗಳು, ಸಚಿವರು, ಕೇಂದ್ರ ಸಚಿವರು, ಸಂಸದರು, ಶಾಸಕರು ಒಗ್ಗಟ್ಟಿನಿಂದ ಹೋರಾಟ ಮಾಡಬೇಕು ಎಂದು ರೈತ ಮುಖಂಡ ಕಿರಂಗೂರು ಪಾಪು ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಮೇಕೆದಾಟು ಯೋಜನೆ ಕುರಿತು ಪ್ರಧಾನಮಂತ್ರಿ ಮೋದಿ ಅವರ ಬಳಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಪಕ್ಷಾತೀತವಾಗಿ ಎಲ್ಲಾ ಪಕ್ಷದ ಸಂಸದರು, ಕೇಂದ್ರ ಸಚಿವರು, ರಾಜ್ಯಸಚಿವರು, ಶಾಸಕರು ಸುದೀರ್ಘವಾಗಿ ಚರ್ಚಿಸುವಂತೆ ಮನವಿ ಮಾಡಿದ್ದಾರೆ.

ಕೆಆರ್‌ಎಸ್ ಅಣೆಕಟ್ಟಿನ ಜಲಾಶಯ ತುಂಬಿ ಲಕ್ಷಾಂತರ ಕ್ಯುಸೆಕ್ ನೀರು ಕಾವೇರಿ ನದಿಯಿಂದ ಹರಿದು ಸಮುದ್ರ ಪಾಲಾಗುತ್ತಿದೆ. ರಾಜ್ಯದಲ್ಲಿ ಅತಿಹೆಚ್ಚು ಬಿಜೆಪಿ ಸಂಸದರು ಆಯ್ಕೆಯಾಗಿದ್ದಾರೆ. ರಾಜ್ಯದ ಹಿತ ಕಾಪಾಡಬೇಕಾದ ಸರ್ಕಾರ ಕಾವೇರಿ ಉಳಿವಿಗಾಗಿ ಆ ನೀರು ಪೋಲಾಗದಂತೆ ತಡೆಯಲು ಮೇಕೆದಾಟು ಯೋಜನೆ ಅನಿವಾರ್ಯತೆ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ತಮಿಳುನಾಡು ಸರ್ಕಾರ ಜಲಾಶಯದಲ್ಲಿ ನೀರು ಇಲ್ಲದಿದ್ದರೂ ನೀರು ಬಿಡಿ ಬಿಡಿ ಎಂದು ಕ್ಯಾತೆ ತೆಗೆದು ರಾಜ್ಯಕ್ಕೆ ಅನ್ಯಾಯ ಮಾಡುತ್ತಾ ಬಂದಿದೆ. ಈಗಲಾದರೂ ಮೇಕೆದಾಟು ಯೋಜನೆ ರೂಪಿಸಿ ಲಕ್ಷಾಂತರ ಕ್ಯೂಸೆಕ್ ನೀರು ಪೋಲಾಗುತ್ತಿರುವುದನ್ನು ತಡೆಗಟ್ಟಿ ಅದನ್ನು ರೈತರ ಹಿತಕ್ಕಾಗಿ, ಪ್ರಾಣಿಪಕ್ಷಿಗಳು, ಜನಸಾಮಾನ್ಯರ ಕುಡಿಯುವ ನೀರಿಗಾಗಿ ಸಂಕಷ್ಟದ ಸಮಯದಲ್ಲಿ ಅಮೂಲ್ಯವಾದ ಜಲ ಬಳಕೆಯಾಗುತ್ತದೆ ಎಂದು ಸಲಹೆ ಮಾಡಿದ್ದಾರೆ.

ಕೆಆರ್ ಎಸ್ ನೀರಿನ ಮಟ್ಟ

ಗರಿಷ್ಠ ಮಟ್ಟ - 124.80 ಅಡಿ

ಇಂದಿನ ಮಟ್ಟ – 122.95 ಅಡಿ

ಒಳ ಹರಿವು – 47,293 ಕ್ಯುಸೆಕ್

ಹೊರ ಹರಿವು – 35182 ಕ್ಯುಸೆಕ್

ನೀರಿನ ಸಂಗ್ರಹ – 46.902 ಟಿಎಂಸಿ