ಕಾಂಗ್ರೆಸ್‌ಗೆ ರಾಜ್ಯ ಅಹಿಂದ ಸಂಘಟನೆ ಬೆಂಬಲ

| Published : Apr 23 2024, 12:46 AM IST

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ರಾಜ್ಯ ಅಹಿಂದ ಸಂಘಟನೆ ಬೆಂಬಲ ಸೂಚಿಸಿದೆ ಎಂದು ಜಿಲ್ಲಾ ಅಹಿಂದ ಮಹಿಳಾ ಘಟಕದ ಅಧ್ಯಕ್ಷೆ ವೇದ ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ರಾಜ್ಯ ಅಹಿಂದ ಸಂಘಟನೆ ಬೆಂಬಲ ಸೂಚಿಸಿದೆ ಎಂದು ಜಿಲ್ಲಾ ಅಹಿಂದ ಮಹಿಳಾ ಘಟಕದ ಅಧ್ಯಕ್ಷೆ ವೇದ ಹೇಳಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ 28 ಲೋಕಸಭೆ ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಅಹಿಂದ ಸಂಘಟನೆ ಬೆಂಬಲ ಸೂಚಿಸಲು ತೀರ್ಮಾನಿಸಿರುವುದರಿಂದ ಚಾಮರಾಜನಗರ ಲೋಕಸಭೆ ಕ್ಷೇತ್ರದಲ್ಲೂ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ಸೂಚಿಸಿದೆ.

ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗ, ಕುರುಬ ಸಮಾಜ, ಉಪ್ಪಾರ ಸಮಾಜ, ಈಡಿಗ ಸಮಾಡ, ದೇವಾಂಗ ಸಮಾಜ, ಸವಿತಾ ಸಮಾಜ, ಮಡಿವಾಳ ಸಮಾಜ, ಕುಂಬಾರ ಸಮಾಜ, ದಲಿತ ಸಮೂಹ, ನಾಯಕ ಜನಾಂಗ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಜನರಿಗೆ 5 ಗ್ಯಾರಂಟಿಗಳನ್ನು ನೀಡಿ ಜೀವನ ಸುಧಾರಣೆಗೆ ಕಾರಣವಾಗಿರುವ ಕಾಂಗ್ರೆಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ಚಾಮರಾಜನಗರ ಲೋಕಸಭೆಯ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ರನ್ನು ಪೂರ್ಣ ಬೆಂಬಲಿಸಿ ಕಾಂಗ್ರೆಸ್‌ ಪಕ್ಷಕ್ಕೆ ಅಹಿಂದ ಮತಗಳನ್ನು ನೀಡಬೇಕು ಈ ಮೂಲಕ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ ರಾಜ್ಯದ ಸಿಎಂ ಸಿದ್ದರಾಮಯ್ಯಗೆ ಬಲ ತುಂಬಬೇಕೆಂದರು.

ಸುದ್ದಿಗೋಷ್ಠಿಯಲ್ಲಿ ಚಾಮರಾಜನಗರ ತಾಲೂಕು ಅಹಿಂದ ಸಂಘಟನೆ ಅಧ್ಯಕ್ಷ ಶಿವು ಜನ್ನೂರು, ಗುಂಡ್ಲುಪೇಟೆ ತಾಲೂಕು ಅಹಿಂದ ಸಂಘಟನೆ ಅಧ್ಯಕ್ಷ ಕೆರಹಳ್ಳಿ ರೇವಣ್ಣ, ಅಹಿಂದ ಸಾಮಾಜಿಕ ಜಾಲತಾಣ ಜಿಲ್ಲಾ ಅಧ್ಯಕ್ಷ ಬಿರೇಶ್‌ ಜಾಲಹಳ್ಳಿ ಹುಂಡಿ, ಕಾರ್ಮಿಕ ವಿಭಾಗ ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಗ್ಗವಡಿ ಕೆಂಪರಾಜು, ಯುವ ಕಾಂಗ್ರೆಸ್‌ ಘಟಕ ಜಿಲ್ಲಾ ಕಾರ್ಯದರ್ಶಿ ಹೊಸಹಳ್ಳಿ ಮಧುಸೂದನ್‌ ಹಾಜರಿದ್ದರು.