ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಜಾಗೃತಿ ಕಾರ್ಯಕ್ರಮ

| Published : Jun 02 2024, 01:45 AM IST

ಸಾರಾಂಶ

ರಾಯಚೂರಿನಲ್ಲಿ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ರಾಯಚೂರು: ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ವಿಧಾನ ಪರಿಷತ್ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನುದ್ದೇಶಿಸಿ ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ಅವರು ಮಾತನಾಡಿ, ಮತದಾನವೆಂಬುವುದು ಅತ್ಯಂತ ಶ್ರೇಷ್ಠವಾದದ್ದು, ಸಮಾಜದ ಅಭಿವೃದ್ಧಿಗೆ ಮತದಾನ ಮಾಡುವುದು ಅತ್ಯವಶ್ಯಕವಾಗಿದೆ. ಆದ್ದರಿಂದ ಈ ಬಾರಿಯ ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಪದವೀಧರ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು. ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾನವನ್ನು ಪ್ರಾಶಸ್ತ್ಯದ ಮೂಲಕ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಪ್ರಾಶಸ್ತ್ಯ ಕ್ರಮಬದ್ಧವಾಗಿರುವಂತೆ ಮತದಾನ ಮಾಡುವುದು ಅತ್ಯವಶ್ಯವಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ನೊಡಲ್ ಅಧಿಕಾರಿ ಡಾ.ಬಿ.ವೈ ವಾಲ್ಮೀಕಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯ ಡಾ.ವೈ.ವೆಂಕಟೇಶ, ನವೋದಯ ಡೆಂಟಲ್ ಕಾಲೇಜಿನ ಡಾ.ಸುರೇಂದ್ರಬಾಬು, ಡಾ.ಜಹೀರಾ, ಡಾ.ಸೋಮನಾಥ, ಡಾ.ನಾಸೀರ, ಡಾ.ಶೀತಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.