ಪಕ್ಷದ ನಿರ್ಧಾರಕ್ಕೆ ಬದ್ಧ: ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆಕನ್ನಡಪ್ರಭ ವಾರ್ತೆ ಹೊಸಕೋಟೆ
ಸಚಿವ ಸ್ಥಾನ ದೊರೆಯದಿರುವುದಕ್ಕೆ ಸಹಜವಾಗಿ ಬೇಸರವಾಗಿದೆ. ಆದರೆ ಅಸಮಾಧಾನ ಇಲ್ಲ. ಪಕ್ಷದ ನಿರ್ಧಾರ ಗೌರವಿಸುತ್ತೇನೆ. ಮುಖ್ಯಮಂತ್ರಿ ಹಾಗೂ ಪಕ್ಷದ ನಾಯಕತ್ವದ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಬದ್ಧನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.ಸಚಿವ ಸಂಪುಟ ರಚನೆ ಕುರಿತು ಪ್ರತಿಕ್ರಿಯಿಸಿದ ಅವರು, ಎಐಸಿಸಿ, ಕೆಪಿಸಿಸಿ ಹಾಗೂ ಮುಖ್ಯಮಂತ್ರಿ ಸೇರಿ ಪಕ್ಷದ ಹಿರಿಯ ನಾಯಕರು ವಿವಿಧ ಪ್ರಾದೇಶಿಕ, ಸಾಮಾಜಿಕ ಹಾಗೂ ರಾಜಕೀಯ ಅಂಶ ಪರಿಗಣಿಸಿ ಸಚಿವರನ್ನು ಆಯ್ಕೆ ಮಾಡಿದ್ದಾರೆ. ಸಚಿವ ಸ್ಥಾನಕ್ಕಾಗಿ ಪ್ರಯತ್ನ ನಡೆಸಿದ್ದು ನಿಜ. ಆದರೆ ಅವಕಾಶ ದೊರೆಯಲಿಲ್ಲ. ಕಾಂಗ್ರೆಸ್‌ನ 135 ಶಾಸಕರಲ್ಲಿ ಪ್ರತಿಯೊಬ್ಬರಿಗೂ ಸಚಿವರಾಗುವ ಅರ್ಹತೆ ಇದೆ. ಕೆಲವರಿಗೆ ಅವಕಾಶ ಸಿಕ್ಕಿದ್ದು, ಕೆಲವರಿಗೆ ಮುಂದಿನ ದಿನಗಳಲ್ಲಿ ಅವಕಾಶ ದೊರೆಯುವ ವಿಶ್ವಾಸವಿದೆ ಎಂದು ಪ್ರತಿಕ್ರಿಯಿಸಿದರು.ಮುಖ್ಯಮಂತ್ರಿಗಳು ಮಾತುಕತೆ ನಡೆಸಿಸೂಕ್ತ ಅವಕಾಶ ನೀಡುವ ಭರವಸೆ ನೀಡಿದ್ದಾರೆ. ಸಚಿವ ಸ್ಥಾನ ಸಿಕ್ಕಿದ್ದರೆ ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ವೇಗ ನೀಡಬಹುದಾಗಿತ್ತು. ಕೆಲವು ಜಿಲ್ಲೆಗಳಿಗೆ ಎರಡು ಸಚಿವ ಸ್ಥಾನ ದೊರೆತಿದ್ದರೆ, ಕೆಲವು ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಹಿಂದಿನ ಸರ್ಕಾರಗಳಲ್ಲಿಯೂ ಈ ರೀತಿ ಆಗಿದ್ದಿದೆ. ಬೆಂಗಳೂರು ನಗರಕ್ಕೂ ಸೀಮಿತ ಸ್ಥಾನಗಳನ್ನೇ ನೀಡಲಾಗಿದೆ ಎಂದರು. ಕಿಯೋನಿಕ್ಸ್ ಅಥವಾ ಬೇರೆ ಸಂಸ್ಥೆ ಅಧ್ಯಕ್ಷರಾಗುವ ಬಗ್ಗೆ ಈವರೆಗೆ ಚರ್ಚೆ ಆಗಿಲ್ಲ. ಮುಖ್ಯಮಂತ್ರಿಗಳು ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡುವುದಾಗಿ ಹೇಳಿದ್ದಾರೆ, ಕಿಯೋನಿಕ್ಸ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಈ ಬಾರಿ ಬೇರೆ ಯುವ ಶಾಸಕರಿಗೆ ಅವಕಾಶ ನೀಡಲಿ. ನನಗೆ ಬೇರೆ ಜವಾಬ್ದಾರಿ ನೀಡಲಿ ಅಥವಾ ಪಕ್ಷ ಸಂಘಟನೆ ಜವಾಬ್ದಾರಿಯನ್ನಾದರೂ ನೀಡಲಿ. ನಿಷ್ಠೆಯಿಂದ ಕೆಲಸ ಮಾಡುತ್ತೇನೆ ಎಂದು ಹೇಳಿದರು.--------------------ಫೋಟೋ: 4 ಹೆಚ್‌ಎಸ್‌ಕೆ 2 ಮತ್ತು 3
2: ಹೊಸಕೋಟೆ ನಗರದಲ್ಲಿ ಶಾಸಕ ಶರತ್ ಬಚ್ಚೇಗೌಡರು ಬೆಂಬಲಿಗರೊಂದಿಗೆ ಸುದ್ದಿಘೋಷ್ಠಿ ನಡೆಸಿದರು.3: ಹೊಸಕೋಟೆ ನಗರದಲ್ಲಿ ಶಾಸಕ ಶರತ್ ಬಚ್ಚೇಗೌಡ ಸುದ್ದಿಗಾರರೊಂದಿಗೆ ಮಾತನಾಡಿದರು.