ಸಾರಾಂಶ
ಹೊನ್ನಿಗನಹಳ್ಳಿ ಗ್ರಾಮ ಪಂಚಾಯತಿಯ ಕೆ.ಡಿ.ಪಿ. ಸಭೆಯು ಗ್ರಾಪಂ ಅಧ್ಯಕ್ಷೆ ಪುಟ್ಟತಾಯಮ್ಮ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾದ ಸಿದ್ದಮ್ಮ ಹಾಗೂ ಗ್ರಾಮ ಪಂಚಾಯಿತಿಯ ಎಲ್ಲಾ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ರೇಷ್ಮೆ, ಪಶು ವೈದ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ, ಶಿಕ್ಷಣ, ಆರೋಗ್ಯ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಕನಕಪುರ: ಹೊನ್ನಿಗನಹಳ್ಳಿ ಗ್ರಾಮ ಪಂಚಾಯತಿಯ ಕೆ.ಡಿ.ಪಿ. ಸಭೆಯು ಗ್ರಾಪಂ ಅಧ್ಯಕ್ಷೆ ಪುಟ್ಟತಾಯಮ್ಮ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾದ ಸಿದ್ದಮ್ಮ ಹಾಗೂ ಗ್ರಾಮ ಪಂಚಾಯಿತಿಯ ಎಲ್ಲಾ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ರೇಷ್ಮೆ, ಪಶು ವೈದ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ, ಶಿಕ್ಷಣ, ಆರೋಗ್ಯ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಅಧ್ಯಕ್ಷೆ ಪುಟ್ಟತಾಯಮ್ಮ ಮಾತನಾಡಿ, ಕೆಡಿಪಿ ಸಭೆಯಲ್ಲಿ ಬೆರಳೆಣಿಕೆಯಷ್ಟು ಸಂಖ್ಯೆಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದಾರೆ. ನಮ್ಮ ಸಾಸಲಾಪುರ ಗ್ರಾಮದಲ್ಲಿ ಸರಿಯಾಗಿ ಬೀದಿ ದೀಪಗಳ ಸೌಲಭ್ಯವಿಲ್ಲ, ಹೊಸದಾಗಿ ಬೀದಿ ದೀಪಗಳನ್ನು ಹಾಕಲು, ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಂತೆ ಹಲವು ಬಾರಿ ಸಾಸಲಪುರ ಗ್ರಾಮಸ್ಥರು, ಗ್ರಾಮ ಪಂಚಾಯತಿ ಅಧ್ಯಕ್ಷೆಯಾದ ನಾನು ಸಂಬಂಧಪಟ್ಟ ಬೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಆದರೆ ಇದುವರೆಗೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಪಂಚಾಯ್ತಿ ಸಮಸ್ಯೆಗಳನ್ನು ತಿಳಿಸಲು ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸದಿದ್ದರೆ ಕೆಡಿಪಿ ಸಭೆ ಮಾಡಿ ಏನು ಪ್ರಯೋಜನ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಕೆಡಿಪಿ ಸಭೆಗೆ ಗೈರು ಹಾಜರಾದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲು ಗ್ರಾಮ ಪಂಚಾಯತಿ ಅಧ್ಯಕ್ಷರು ಸೂಚನೆ ನೀಡಿದರು.
ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಯೋಜನೆ ಮತ್ತು ಅನುಷ್ಠಾನದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದರು, ಕೆಡಿಪಿ ಸಭೆಯ ಸದಸ್ಯ ಕಾರ್ಯದರ್ಶಿ ಪಿಡಿಒ ಮಹೇಶ್ ಎಂ. ಕೆಡಿಪಿ ಸಭೆಯ ಮಹತ್ವ ಹಾಗೂ ಗ್ರಾಮ ಪಂಚಾಯತಿಯ ಸವಲತ್ತುಗಳು, ಸರ್ಕಾರದ ಯೋಜನೆಗಳ ಮಾಹಿತಿ ನೀಡಿದರು,ಪಂಚಾಯ್ತಿ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಹಾಲು ಉತ್ಪಾದಕರ ಸಹಕಾರ ಸಂಘದ ಇಒ ಸಭೆಯಲ್ಲಿ ಭಾಗವಹಿಸಿದ್ದರು.