ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸರ್ವೆಗೆ ಸೂಚನೆ

| Published : Aug 23 2024, 01:08 AM IST

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸರ್ವೆಗೆ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ಅವಶ್ಯಕವೆನಿಸುವ ಡಿಮಾಂಡ್ ಸರ್ವೆ ಕೈಗೊಳ್ಳುವಂತೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ಅವಶ್ಯಕವೆನಿಸುವ ಡಿಮಾಂಡ್ ಸರ್ವೆ ಕೈಗೊಳ್ಳುವಂತೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬೆಳಗಾವಿ ವೇಗದಲ್ಲಿ ಬೆಳೆಯುತ್ತಿರುವ ನಗರವಾಗಿದ್ದು, ಬೆಂಗಳೂರು ನಂತರ ಎರಡನೇ ರಾಜಧಾನಿ ಎನಿಸಿಕೊಂಡಿದೆ. ವಿಮಾನ ಸೇವೆಯಲ್ಲಿ ರಾಜ್ಯದಲ್ಲಿ ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಗಳ ನಂತರ ಮೂರನೆಯ ಅತಿ ದೊಡ್ಡ ನಿಲ್ದಾಣವಾಗಿ ಹೆಸರು ಮಾಡಿದೆ ಎಂದರು.

ಬೆಳಗಾವಿಯಿಂದ ಈಗಾಗಲೇ ದಿನನಿತ್ಯ 10 ವಿಮಾನಗಳು ದೇಶದ ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸುವಲ್ಲಿ ಯಶಸ್ವಿಯಾಗಿವೆ. ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ನಗರದಿಂದ ಹಾಗೂ ಕರ್ನಾಟಕ ರಾಜ್ಯದ ಬೆಳಗಾವಿ ಜಿಲ್ಲೆಗೆ ಹತ್ತಿರವಿರುವ ಬಾಗಲಕೋಟೆ, ವಿಜಯಪುರ, ಧಾರವಾಡ ಜಿಲ್ಲೆಯಿಂದಲೂ ಸಹ ವಿಮಾನ ಪ್ರಯಾಣಿಕರು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಿವಿಧ ನಗರಗಳಿಗೆ ಪ್ರವಾಸ ಮಾಡುತ್ತಿರುವುದು ವಿಶೇಷ ಎಂದರು.

ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ , ಬೆಳಗಾವಿ ಉತ್ತರ ಶಾಸಕ ಆಸಿಫ್ ಸೇಠ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ತ್ಯಾಗರಾಜನ್ ಹಾಜರಿದ್ದರು.