ಬೀದರ್‌ ಉತ್ಸವ ಸಭೆ ನಡೆಸಲು ಡಿಸಿಗೆ ಸೂಚನೆ:ಖಂಡ್ರೆ

| Published : Dec 02 2024, 01:19 AM IST

ಬೀದರ್‌ ಉತ್ಸವ ಸಭೆ ನಡೆಸಲು ಡಿಸಿಗೆ ಸೂಚನೆ:ಖಂಡ್ರೆ
Share this Article
  • FB
  • TW
  • Linkdin
  • Email

ಸಾರಾಂಶ

Notice to DC to hold Bidar festival meeting: Khandre

ಬೀದರ್‌ ಉತ್ಸವ ಆಯೋಜನೆ ಕುರಿತಂತೆ ಶೀಘ್ರದಲ್ಲಿ ಸಭೆ ನಡೆಸಿ ಸಾರ್ವಜನಿಕ ಮುಖಂಡರ ಅಭಿಪ್ರಾಯ ಸಂಗ್ರಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಬೀದರ್ ಉತ್ಸವ ಕುರಿತಾಗಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವದು ಎಂದರು. ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ಈ ಹಿಂದೆಯೇ ನಾನು ಭ್ರಷ್ಟ ಅಧಿಕಾರಿಗಳನ್ನು ತೆಗೆದು ಹಾಕುವಂತೆ ಸೂಚಿಸಿದ್ದೆ, ಈಗ ಅವರೇ ಸಿಕ್ಕು ಹಾಕಿಕೊಂಡಿದ್ದಾರೆ, ಭ್ರಷ್ಟಾಚಾರ ಕ್ಯಾನ್ಸರ್‌ ಇದ್ದಂತಿದೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಎಲ್ಲ ಶಿಸ್ತು ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ತಿಳಿಸಿದರು.

----

ಫೈಲ್‌ 1ಬಿಡಿ5

---