ಫಸಲ್‌ ವಿಮಾ ಯೋಜನೆ: ತಿರಸ್ಕೃತ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ

| Published : Feb 16 2025, 01:45 AM IST

ಫಸಲ್‌ ವಿಮಾ ಯೋಜನೆ: ತಿರಸ್ಕೃತ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ರೈತರುಗಳು ಬೆಳೆ ವಿಮೆ ಯೋಜನೆಯಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಹಾಗೂ ಬೇಸಿಗೆ ಹಂಗಾಮಿಗೆ ಸಂಬಂಧಪಟ್ಟಂತೆ ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಫೆ.28 ಕೊನೆಯ ದಿನವಾಗಿದೆ ಎಂದು ಹರಿಹರ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

- ಮುಂಗಾರು ಹಂಗಾಮಿನಲ್ಲಿ 93, ಬೇಸಿಗೆ ಹಂಗಾಮಿನಲ್ಲಿ 53 ಅರ್ಜಿ ತಿರಸ್ಕೃತ - - - ಹರಿಹರ: ತಾಲೂಕಿನ ರೈತರುಗಳು ಬೆಳೆ ವಿಮೆ ಯೋಜನೆಯಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಹಾಗೂ ಬೇಸಿಗೆ ಹಂಗಾಮಿಗೆ ಸಂಬಂಧಪಟ್ಟಂತೆ ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಫೆ.28 ಕೊನೆಯ ದಿನವಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಮುಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಲ್ಲಿ ವಿಮಾ ಪರಿಹಾರ ಪಡೆಯಲು ಅರ್ಹರಿದ್ದು, ಬೆಳೆ ಸಮೀಕ್ಷೆ ವಿವರಗಳನ್ನು ಬೆಳೆ ವಿಮೆಗೆ ನೊಂದಾಯಿಸಿದ ಬೆಳೆಯ ವಿವರಗಳೊಂದಿಗೆ ಹೋಲಿಕೆ ಮಾಡಿದ ನಂತರ ತಾಳೆಯಾಗದ ಕೆಲವು ಅರ್ಜಿಗಳು ಸಂಬಂಧಪಟ್ಟ ವಿಮಾ ಕಂಪನಿಯವರು ತಿರಸ್ಕರಿಸಿದ್ದಾರೆ.

ಇಂತಹ ಪ್ರಸ್ತಾವನೆಗಳು ಹರಿಹರ ತಾಲೂಕಿನಲ್ಲಿ 93 ಮುಂಗಾರು ಹಂಗಾಮಿನಲ್ಲಿ ಮತ್ತು 53 ಬೇಸಿಗೆ ಹಂಗಾಮಿನಲ್ಲಿ ತಿರಸ್ಕೃತಗೊಂಡಿವೆ. ಪ್ರಸ್ತಾವನೆ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರ ಕಸಬಾ ಮತ್ತು ಮಲೇಬೆನ್ನೂರು ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ದಾಖಲೆಗಳನ್ನು ಸಲ್ಲಿಸಲು 2023-24 ನೇ ಪಹಣಿ ಪತ್ರಿಕೆಯಲ್ಲಿ ವಿಮೆಗೆ (ಆರ್‌ಟಿಟಿಸಿ) ನೋಂದಾಯಿಸಿದ ಬೆಳೆ ನಮೂದಾಗಿರಬೇಕು. ಬೆಂಬಲ ಬೆಲೆ ಯೋಜನೆ ಪ್ರಯೋಜನೆ ಪಡೆದಿದ್ದಲ್ಲಿ ರಸೀದಿ ಸಲ್ಲಿಸುವುದು. ವಿಮೆಗೆ ನೋಂದಾಯಿತ ಉತ್ಪನ್ನವನ್ನು ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ಸದರಿ ದಾಖಲೆ ಸಲ್ಲಿಸಬೇಕು. ತಿರಸ್ಕೃತ ಪ್ರಸ್ತಾವನೆಯ ರೈತರು ನಿಗದಿತ ದಾಖಲೆಗಳನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಿದಲ್ಲಿ ತಾಲೂಕುಮಟ್ಟದ ಸಮಿತಿ ಸಭೆಯಲ್ಲಿ ಮಂಡಿಸಿ, ಕೂಲಂಕುಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.

ತಿರಸ್ಕೃತ ಅರ್ಜಿಗಳ ಬಗ್ಗೆ ವಿಮೆ ನೋಂದಾಯಿತ ರೈತರು ಆಕ್ಷೇಪಣೆಗಳು ಇದ್ದಲ್ಲಿ ಫೆ.28ರೊಳಗೆ ಲಿಖಿತ ರೂಪದಲ್ಲಿ ರೈತ ಸಂಪರ್ಕ ಕೇಂದ್ರ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಮನವಿ ಸಲ್ಲಿಸಿ, ಮಾಹಿತಿ ಪಡೆಯಬಹುದು ಎಂದು ತಿಳಿಸಲಾಗಿದೆ.

- - - (ಸಾಂದರ್ಭಿಕ ಚಿತ್ರ)