ಸ್ವಚ್ಛತಾ ಕಾರ್ಯ ಕೈಗೊಳ್ಳದಕ್ಕೆ ಪಿಡಿಒಗೆ ನೋಟೀಸ್

| Published : May 22 2024, 12:47 AM IST

ಸಾರಾಂಶ

ತಿಯೊಬ್ಬ ನೀರಿಗಂಟೆಗಳಿಂದ ನೀರು ಬಿಡುವ ಅವಧಿ, ಎಷ್ಟು ಮನೆಗಳಿವೆ ಎಂಬ ಮಾಹಿತಿ ಸಂಗ್ರಹ, ನೀರಿನ ಶುದ್ಧತೆ ಬಗ್ಗೆ ಈ ಮುಂಚೆ ತರಬೇತಿ ನೀಡಿದ್ದು, ಅದರಂತೆ ನೀರಿನ ಶುದ್ಧತೆ ಪರೀಕ್ಷಿಸಿ ನೀರು ಬಿಡಬೇಕು. ಗ್ರಾಮಗಳಲ್ಲಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವುದು ಮೊದಲ ಆದ್ಯತೆ ನೀಡಬೇಕು.

- ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ. ಗಾಯತ್ರಿಫೋಟೋ- 21ಎಂವೈಎಸ್33ತಗಡೂರು ಗ್ರಾಮದಲ್ಲಿ ಕಲುಷಿತಗೊಂಡಿದ್ದ ಕುಡಿಯುವ ನೀರು ಸರಬರಾಜು ಮಾಡುವ ಮೂಲ ಬೋರ್ ವೆಲ್ ಸ್ಥಳಕ್ಕೆ ಜಿಪಂ ಸಿಇಒ ಕೆ.ಎಂ. ಗಾಯತ್ರಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.21ಎಂವೈಎಸ್34

ತಗಡೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಜಿಪಂ ಸಿಇಒ ಕೆ.ಎಂ. ಗಾಯತ್ರಿ ಭೇಟಿ ನೀಡಿ ಆರೋಗ್ಯ ವಿಚಾರಸಿದರು.----

ಕನ್ನಡಪ್ರಭ ವಾರ್ತೆ ಮೈಸೂರು

ಕುಡಿಯುವ ನೀರು ಕಲುಷಿತಗೊಂಡಿದ್ದರೂ ತಗಡೂರು ಗ್ರಾಮದಲ್ಲಿ ಇನ್ನೂ ಸ್ವಚ್ಛತಾ ಕಾರ್ಯ ಕೈಗೊಳ್ಳದಕ್ಕೆ ಪಿಡಿಒಗೆ ನೋಟೀಸ್ ಜಾರಿಗೆ ಜಿಪಂ ಸಿಇಒ ಕೆ.ಎಂ. ಗಾಯತ್ರಿ ಸೂಚಿಸಿದರು.

ಜಿಲ್ಲೆಯ ನಂಜನಗೂಡು ತಾಲೂಕಿನ ತಗಡೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ವಹಿಸುವ ಬಗ್ಗೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು, ತಾಲೂಕು ಪಂಚಾಯಿತಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿಯೊಂದಿಗೆ ಸಭೆ ಅವರು ನಡೆಸಿದರು.

ಎಲ್ಲಾ ವಾರ್ಡ್ ಗಳಲ್ಲೂ ನೀರಿನ ಟ್ಯಾಂಕ್, ಬೋರ್ ವೆಲ್ ಗಳ ಸ್ವಚ್ಛತೆ ಹಾಗೂ ಶುದ್ಧತೆಗಾಗಿ ನೀರಿನ ಪರೀಕ್ಷೆಯನ್ನು ಕಾಲ ಕಾಲಕ್ಕೆ ಮಾಡುವಂತೆ ಪಿಡಿಒಗೆ ಸೂಚಿಸಿದರು. ಅಲ್ಲದೆ, ಎಲ್ಲಾ ಚರಂಡಿಗಳನ್ನು ಸ್ವಚ್ಛಗೊಳಿಸದಿದ್ದಲ್ಲಿ ಪಿಡಿಒ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುವುದಾಗಿ ಅವರು ಎಚ್ಚರಿಸಿದರು.

ಪ್ರತಿಯೊಬ್ಬ ನೀರಿಗಂಟೆಗಳಿಂದ ನೀರು ಬಿಡುವ ಅವಧಿ, ಎಷ್ಟು ಮನೆಗಳಿವೆ ಎಂಬ ಮಾಹಿತಿ ಸಂಗ್ರಹ, ನೀರಿನ ಶುದ್ಧತೆ ಬಗ್ಗೆ ಈ ಮುಂಚೆ ತರಬೇತಿ ನೀಡಿದ್ದು, ಅದರಂತೆ ನೀರಿನ ಶುದ್ಧತೆ ಪರೀಕ್ಷಿಸಿ ನೀರು ಬಿಡಬೇಕು. ಗ್ರಾಮಗಳಲ್ಲಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವುದು ಮೊದಲ ಆದ್ಯತೆ ನೀಡಬೇಕು. ಈ ಬಗ್ಗೆ ನಿರ್ಲಕ್ಷ್ಯವಹಿಸದಂತೆ ಪಿಡಿಓಗೆ ತಿಳಿಸಿದರು.

ಬಳಕೆಯಲ್ಲಿಲ್ಲದ ಓವರ್ ಹೆಡ್ ಟ್ಯಾಂಕ್ ಅನ್ನು ಶೀಘ್ರವೇ ದುರಸ್ತಿಗೊಳಸಿ, ಬಳಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಜೆಜೆಎಂ ಅಡಿಯಲ್ಲಿ ಶೀಘ್ರವೇ ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗೆ ಸೂಚಿಸಿದರು.

ಆಶಾ ಕಾರ್ಯಕರ್ತೆಯರು ಪ್ರತಿದಿನ ಮನೆ ಮನೆಗೆ ಭೇಟಿ ನೀಡಿ ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಅರಿವು ಮೂಡಿಸಬೇಕು. ಕುಡಿಯುವ ನೀರನ್ನು ಕುದಿಸಿ ಆರಿಸಿ ಬಳಸುವಂತೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜಾಗೃತಿ ಕಾರ್ಯ್ರಮಕ್ಕಾಗಿ ತಾಲೂಕು ಮಟ್ಟದಲ್ಲಿ ಸಮಿತಿ ರಚಿಸಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಕೃಷಿ ಸಖಿ, ಪಶು ಸಖಿ, ಆರೋಗ್ಯ ಇಲಾಖೆ ಐಇಸಿ ಹಾಗೂ ತಾಪಂ ಐಇಸಿಗಳಿಂದ ಅರಿವು ಮೂಡಿಸುವುದು. ಸಣ್ಣ ಮಕ್ಕಳು, ಬಾಣಂತಿಯರು, ಗರ್ಭಿಣಿಯರು ವಯಸ್ಸಾದವರಿಗೆ ಹೆಚ್ಚಿನ ಅರಿವು ಮೂಡಿಸುವಂತೆ ಅವರು ಹೇಳಿದರು.

ಗ್ರಾಮದಲ್ಲಿ ಕಲುಷಿತಗೊಂಡಿದ್ದ ಕುಡಿಯುವ ನೀರು ಸರಬರಾಜು ಮಾಡುವ ಮೂಲ ಬೋರ್ ವೆಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ನಂತರ ತಗಡೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿ ರೋಗಿಗಳ ಆರೋಗ್ಯ ವಿಚಾರಸಿದರು.

ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರಸ್ವಾಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಂಜಿತ್, ತಾಪಂ ಇಒ ಪೂರ್ಣಿಮಾ, ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ತಾಲೂಕು ಆರೋಗ್ಯಾಧಿಕಾರಿ ಡಾ. ಈಶ್ವರ್, ನರೇಗಾ ಸಹಾಯಕ ನಿರ್ದೇಶಕ ಶಿವಕುಮಾರ್ ಮೊದಲಾದವರು ಇದ್ದರು.