ಸಾರಾಂಶ
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬೂಬಕ್ಕರ್ ಅವರಿಗೆ ಪ್ರಶಂಸಾ ಪತ್ರವನ್ನು ವಿತರಿಸಿ, ಅಭಿನಂದಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸೆಪ್ಟೆಂಬರ್ ೨೦೨೪ರಲ್ಲಿ ಅತೀ ಹೆಚ್ಚು ಮಾನವ ದಿನಗಳನ್ನು ಸೃಜಿಸಿದ ವಿಭಾಗದಲ್ಲಿ ನೀರುಮಾರ್ಗ ಗ್ರಾಮ ಪಂಚಾಯಿತಿಗೆ ಪ್ರಥಮ ಬಹುಮಾನ ಲಭಿಸಿದೆ.ಮಂಗಳೂರು ತಾಲೂಕಿನಲ್ಲಿಯೇ ನೀರುಮಾರ್ಗ ಗ್ರಾಮವು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಉತ್ತಮ ಪ್ರಗತಿ ಕಂಡಿದೆ. ಈ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬೂಬಕ್ಕರ್ ಅವರಿಗೆ ಪ್ರಶಂಸಾ ಪತ್ರವನ್ನು ವಿತರಿಸಿ, ಅಭಿನಂದಿಸಿದರು.
ಈ ಸಂದರ್ಭ ಉದ್ಯೋಗ ಖಾತರಿಯ ಮಂಗಳೂರು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ಲು, ಪಂಚಾಯಿತಿ ಲೆಕ್ಕ ಸಹಾಯಕರಾದ ಉಮಾನಾಥ ಕೋನಿಮಾರ್ ಇದ್ದರು.----------------