ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಎನ್‌ಆರ್‌ಐ ಸಚಿವಾಲಯ: ಡಾ. ಆರತಿ ಕೃಷ್ಣ

| Published : Apr 16 2024, 01:11 AM IST / Updated: Apr 16 2024, 10:54 AM IST

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಎನ್‌ಆರ್‌ಐ ಸಚಿವಾಲಯ: ಡಾ. ಆರತಿ ಕೃಷ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ಸರ್ಕಾರ ನೀಡಿದ ಜನಪರ ಯೋಜನೆಗಳಿಗೆ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು, ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ. ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಆರತಿ ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

 ಉಡುಪಿ :  ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಅನಿವಾಸಿ ಭಾರತೀಯರ ಕುಂದುಕೊರತೆಗಳ ಪರಿಹಾರಕ್ಕಾಗಿ ಪ್ರತ್ಯೇಕ ಸಚಿವಾಲಯ ರಚಿಸಲಾಗುವುದು ಎಂದು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಹೇಳಿದರು.

ಅವರು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಗಳು, ನಗರಸಭಾ ಸದ‌ಸ್ಥರು ಹಾಗೂ ನಗರಸಭೆಗೆ ಸ್ಪರ್ಧಿಸಿದ ಪಕ್ಷದ ಮುಂದಾಳುಗಳಿಗಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ನೀಡಿದ ಜನಪರ ಯೋಜನೆಗಳಿಗೆ ಮತದಾರರಲ್ಲಿ ಕೃತಜ್ಞತಾ ಭಾವ ಇದ್ದು, ಅವರ ಆಶೀರ್ವಾದದಿಂದ ರಾಜ್ಯದಲ್ಲಿ 20 ಸ್ಥಾನ ಗೆಲ್ಲುವುದು ಖಚಿತ. ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಜನರು ಬದುಕನ್ನು ಕಟ್ಟುವುದರೊಂದಿಗೆ ಶಾಂತಿ, ಸಾಮರಸ್ಯದಿಂದ ಸುಭದ್ರ ಆಡಳಿತ ನೀಡಿದ ಕಾಂಗ್ರೆಸ್‌ನ ಕೈ ಹಿಡಿಯಲಿದ್ದಾರೆ. ಕಾಂಗ್ರೆಸ್ ಪಕ್ಷದ ಬಗ್ಗೆ ಇರುವ ಮತದಾರರ ಒಲವನ್ನು ಮತವಾಗಿ ಪರಿವರ್ತಿಸಲು ಪಕ್ಷದ ಚುನಾವಣಾ ಉಸ್ತುವಾರಿಗಳು ಬದ್ಧತೆಯಿಂದ ಶ್ರಮಿಸಬೇಕಿ ಎಂದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಕೆ.ಪಿ.ಸಿ.ಸಿ. ಉಪಾಧ್ಯಕ್ಷ ಎಂ‌.ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಕೆ.ಪಿ.ಸಿ.ಸಿ. ವೀಕ್ಷಕ ನವೀನ್ ಶೆಟ್ಟಿ, ಪಕ್ಷದ ಚುನಾವಣಾ ಉಸ್ತುವಾರಿಗಳು, ನಗರಸಭಾ ಸದಸ್ಯರು ಹಾಗೂ ಪಕ್ಷದ ವಿವಿಧ ಮುಂದಾಳುಗಳು ಭಾಗವಹಿಸಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸತೀಶ್ ಕೊಡವೂರು ಸ್ವಾಗತಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಮಂಚಿ ವಂದಿಸಿದರು.