ಸಾರಾಂಶ
ಚಿನ್ನಾಭರಣ ಮಳಿಗೆ ಹಾಗೂ ಬ್ಯಾಂಕುಗಳಿಗೆ ಭೇಟಿ ನೀಡಿ ಭದ್ರತೆಯ ಬಗ್ಗೆ ಮಾಹಿತಿ
ಕನ್ನಡಪ್ರಭ ವಾರ್ತೆ ಮೈಸೂರು
ಜಿಲ್ಲೆಯಲ್ಲಿ ಹಾಡಹಗಲೇ ನಡೆದ ಡಕಾಯಿತಿ ಪ್ರಕರಣ ಹಿನ್ನೆಲೆಯಲ್ಲಿ ನಗರ ಪೊಲೀಸರು ಸೋಮವಾರ ನಗರಕ್ಕೆ ಪ್ರವೇಶಿಸುವ 30 ಕಡೆ ನಾಕಾಬಂಧಿ ಮಾಡಿ ವಾಹನಗಳ ತಪಾಸಣೆ ನಡೆಸಿದರು. ಅಲ್ಲದೆ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿ ಎಂ. ಮುತ್ತುರಾಜು, ಎಸಿಪಿ ಅಶ್ವತ್ಥನಾರಾಯಣ್ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರದ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿದರು. ಅಲ್ಲದೆ, ಚಿನ್ನಾಭರಣ ಮಳಿಗೆ ಹಾಗೂ ಬ್ಯಾಂಕುಗಳಿಗೆ ಭೇಟಿ ನೀಡಿ ಭದ್ರತೆಯ ಬಗ್ಗೆ ಮಾಹಿತಿ ಪಡೆದರು. ಡಿ. ದೇವರಾಜು ಅರಸು ರಸ್ತೆಯಲ್ಲಿರುವ ಮಳಿಗೆಗಳಿಗೆ ಭೇಟಿ ನೀಡಿ, ಮಾಲೀಕರಿಂದ ಮಾಹಿತಿ ಪಡೆದರು.ಅಶೋಕ ರಸ್ತೆಯಲ್ಲಿ ಕಾಲ್ನಡಿಗೆ ಮೂಲಕ ಗಸ್ತು ಮಾಡಿ, ಜ್ಯೂವಲರಿ ಅಂಗಡಿಗಳ ಭದ್ರತೆ ಮತ್ತು ಸಿಸಿಟಿವಿ ಕ್ಯಾಮಾರಗಳ ಪರಿಶೀಲಿಸಿ, ಮಾಲೀಕರಿಗೆ ಸಲಹೆ ಸೂಚನೆಗಳನ್ನು ನೀಡಿದರು.