ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

| Published : Aug 11 2025, 01:56 AM IST

ಸಾರಾಂಶ

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪಪೂ ಕಾಲೇಜಿನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಯೋಗದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಬೈಂದೂರು

ನಿಸ್ವಾರ್ಥ ಮನೋಭಾವದ ಸೇವೆಯೇ ನಿಜವಾದ ಧರ್ಮ. ಅಂತಹ ಸೇವಾ ಮನೋಭಾವನೆಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದು ಹಿರಿಯ ತೆರಿಗೆ ಸಲಹೆಗಾರ ಜತಿಂದ್ರ ಮರವಂತೆ ಅವರು ಅಭಿಪ್ರಾಯಪಟ್ಟರು.

ಅವರು ಇಲ್ಲಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪಪೂ ಕಾಲೇಜಿನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಯೋಗದಲ್ಲಿ ನಡೆದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ಸ್ವಾಗತಿಸಿದರು. ಉಪನ್ಯಾಸಕಿ ಪ್ರಫುಲ್ಲಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ಗೌತಮಿ ನಾಯಕ್ ವಂದಿಸಿದರು.