ಕೊಪ್ಪ: ಎನ್‌ಎಸ್‌ಎಸ್‌ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

| Published : Jan 13 2025, 12:47 AM IST

ಕೊಪ್ಪ: ಎನ್‌ಎಸ್‌ಎಸ್‌ ವಾರ್ಷಿಕ ವಿಶೇಷ ಶಿಬಿರ ಸಮಾರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಕೊಪ್ಪ ಭಾರತ ಮಾತಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ವಿದ್ಯಾರ್ಥಿಗಳು ಶೈಕ್ಷಣಿಕ ಅವಧಿಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಾಗಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ ಎನ್ ಚಂದ್ರಮೋಹನ್ ಕರೆ ನೀಡಿದ್ದಾರೆ.

ಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ನಡೆದ ಕೊಪ್ಪ ಭಾರತ ಮಾತಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಫಾ. ಎಬಿನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಒಂದು ವಾರ ಕಾಲ 50 ಕ್ಕೂ ಅಧಿಕ ಶಿಬಿರಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡು ವಿಶಿಷ್ಟ ಅನುಭವವನ್ನು ಪಡೆಯುವ ಅವಕಾಶ ಲಭಿಸಿದೆ ಎಂದರು.

ಶ್ರಮದಾನ ಸಾಂಸ್ಕೃತಿಕ ಕಾರ್ಯಕ್ರಮಗಳು ಉಪನ್ಯಾಸ ಕಾರ್ಯಕ್ರಮಗಳು ನಡುವೆ ಕುಶಾಲನಗರ ಮೈಸೂರು ರಸ್ತೆ ನಡುವೆ ಕಾವೇರಿ ನದಿಯ ಎರಡು ಸೇತುವೆಗಳ ಸ್ವಚ್ಛತೆ ಮತ್ತು ಅವುಗಳಿಗೆ ಬಣ್ಣ ಬಳಿಯುವ ಕಾರ್ಯಕ್ರಮ, ರಸ್ತೆ ಬದಿಯಲ್ಲಿ ಅಳವಡಿಸಲಾದ ಸೂಚನಾ ಫಲಕಗಳ ಸ್ವಚ್ಛತಾ ಕಾರ್ಯಕ್ರಮ, ಶಾಲಾ ಆವರಣ ಶುಚಿತ್ವ, ಸಾರ್ವಜನಿಕರಿಗೆ ಕಾನೂನು ಮತ್ತು ಪರಿಸರದ ಬಗ್ಗೆ ತಿಳುವಳಿಕೆ ಕಾರ್ಯಾಗಾರ, ಗ್ರಾಮೀಣ ಮಹಿಳೆಯರಿಗೆ ಮತ್ತು ಯುವಕರಿಗೆ ನಾಯಕತ್ವ ತರಬೇತಿ ಶಿಬಿರಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ ಸೇರಿದಂತೆ ಹಲವು ಚಟುವಟಿಕೆಗಳನ್ನು ನಡೆಸಲಾಯಿತು ಎಂದು ತಿಳಿಸಿದ ಅವರು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಸುವ ಕಾರ್ಯವನ್ನು ರಾಷ್ಟ್ರೀಯ ಸೇವಾ ಯೋಜನೆ ತಿಳಿಸುತ್ತದೆ ಎಂದರು.

ಶಿಬಿರದ ಅಧಿಕಾರಿ ಎಚ್ ಆರ್ ದಿನೇಶ್ ನೇತೃತ್ವದಲ್ಲಿ ಸಹ ಶಿಬಿರಾಧಿಕಾರಿಗಳಾದ ಬೃಂದಾ, ಕೀರ್ತನ್ ಕುಟ್ಟಪ್ಪ ಅವರ ನೇತೃತ್ವದಲ್ಲಿ ಏಳು ದಿನಗಳ ಕಾಲ ಯಶಸ್ವಿ ಶಿಬಿರ ನಡೆದಿರುವುದಾಗಿ ಫಾ. ಎಬಿನ್ ಹೇಳಿದರು.

ಇದೇ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಪರವಾಗಿ ಫಾ ಎಬಿನ್ ಮತ್ತು ಶಿಬಿರ ಅಧಿಕಾರಿ ದಿನೇಶ್ ಅವರನ್ನು ಗೌರವಿಸಲಾಯಿತು.

ಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಸದಸ್ಯರಾದ ರೇಣುಕಾ ಸ್ವಾಮಿ, ಫಾ ಟಿಟೋ ಥಾಮಸ್, ಫಾ ಜೇಸನ್, ಸಹ ಶಿಬಿರಾಧಿಕಾರಿ ಬೃಂದಾ, ಕೀರ್ತನ್ ಕುಟ್ಟಪ್ಪ ಮತ್ತು ಉಪನ್ಯಾಸಕರು ಇದ್ದರು.

ಶಿಬಿರ ಅಧಿಕಾರಿ ಎಚ್ ಆರ್ ದಿನೇಶ್ ನಿರೂಪಿಸಿದರು.