ಸಾರಾಂಶ
ವಿದ್ಯಾರ್ಥಿಗಳಾಗಿರುವಾಗಲೇ ನಾಯಕತ್ವ ಗುಣ ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ತುಂಬಾ ಸಹಕಾರಿ ಎಂದು ಯಾದಗಿರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮಹೇಶ ಕಲಾಲ ಹೇಳಿದರು.
ಕನ್ನಡಪ್ರಭ ವಾರ್ತೆ ಯಾದಗಿರಿ
ವಿದ್ಯಾರ್ಥಿಗಳಾಗಿರುವಾಗಲೇ ನಾಯಕತ್ವ ಗುಣ ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ತುಂಬಾ ಸಹಕಾರಿ ಎಂದು ಯಾದಗಿರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮಹೇಶ ಕಲಾಲ ಹೇಳಿದರು.ನಗರದ ಬಾಲಾಜಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಒಂದಲ್ಲಾ ಒಂದು ಪ್ರತಿಭೆ ಇದ್ದೇ ಇರುತ್ತದೆ. ಅಂತಹ ಪ್ರತಿಭೆ ಅನಾವರಣಗೊಳ್ಳಲು ಇಂತಹ ಶಿಬಿರಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಅವಶ್ಯ ಎಂದರು. ವ್ಯಕ್ತಿಯ ವಿಕಸನಕ್ಕೆ ಜ್ಞಾನ ಪೂರಕ. ಆದ್ದರಿಂದ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ರೂಢಿಸಿಕೊಳ್ಳಬೇಕು ಎಂದರು.ರಾಯಚೂರು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ಸದಸ್ಯರಾದ ಕಿಶನ್ ರಾಠೋಡ ಮಾತನಾಡಿ, ಪ್ರತಿಯೊಬ್ಬರು ಜೀವನದಲ್ಲಿ ಗುರಿ ತಲುಪಬೇಕಾದರೆ ವಿದ್ಯಾವಂತರಾಗಬೇಕು. ವಿದ್ಯಾವಂತರಾಗಲು ಪುಸ್ತಕಗಳನ್ನು ಹೆಚ್ಚಾಗಿ ಓದಬೇಕು ಎಂದು ಸಲಹೆ ನೀಡಿದರು.
ಬಾಲಾಜಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಶ್ರೀನಿವಾಸ ಬಂಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲಾಜಿ ಎಜುಕೇಶನಲ್ ಟ್ರಸ್ಟ್ ನ ಕಾರ್ಯದರ್ಶಿ ರಘುನಾಥರಡ್ಡಿ ಪಾಟೀಲ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಉಪನ್ಯಾಸಕರಾದ ಭೀಮರಾಯ ಮಾನೆಗಾರ. ಭೀಮರಾಯ ನೈಕೋಡಿ, ಸಾಬಣ್ಣ ಹೊನಿಗೇರ, ಮಾಳಪ್ಪ ಪೂಜಾರಿ, ರಾಮಕೃಷ್ಣ ಗುಡಾಲ್, ಸುಜಾತ ಕುಲಕರ್ಣಿ ಸೇರಿದಂತೆ ಇತರರಿದ್ದರು.