ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಶಹಾಪುರ ಕೆಎಲ್‌ಇ ಸಂಸ್ಥೆಯ ಶ್ರೀ ಬಿ.ಎಂ.ಕಂಕನಾವಾಡಿ ಆಯುರ್ವೇದ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ-03ರ ವಿಶೇಷ ಶಿಬಿರವನ್ನು ಮಣ್ಣೂರು ಗ್ರಾಮದಲ್ಲಿ ಉದ್ಘಾಟಿಸಲಾಯಿತು.ಡಾ.ಸಂದೀಪ ಸಗರೆ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳು ಕಾರ್ಯಕ್ರಮದ ಸ್ವಾಗತ ಭಾಷಣ ಹಾಗೂ ಅತಿಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಜಿಲ್ಲಾ ನ್ಯಾಯಾಧೀಶರು ಹಾಗೂ ಕಾಯಂ ಜನತಾ ನ್ಯಾಯಾಲಯ ಅಧ್ಯಕ್ಷ ಪಲ್ಲೇದ ರವೀಂದ್ರ ಜಡಿಯಪ್ಪ ಅವರು ಉದ್ಘಾಟಿಸಿ ಮಾತನಾಡಿ, ವೈದ್ಯಕೀಯ ವೃತ್ತಿಯಲ್ಲಿ ಕಾನೂನಿನ ಮಹತ್ವ ಹಾಗೂ ಕಾಯಂ ಜನತಾ ನ್ಯಾಯಾಲಯದ ವಿಶೇಷತೆಗಳು ಮತ್ತು ಅದರ ಸದುಪಯೋಗವನ್ನು ಹೇಗೆ ಪಡೆಯಬೇಕು ಎಂದು ತಿಳಿಸಿಕೊಟ್ಟರು.ಶ್ರೀ ಬಿ.ಎಂ.ಕಂಕನಾವಾಡಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸುಹಾಸ್ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಸಂದೀಪ ಪಾಟೀಲ ಮಾತನಾಡಿ, PLV (Para Leagal Volunteer) ಗಳಾಗಿ ಅರ್ಜಿ ಸಲ್ಲಿಸುವ ಕುರಿತು ಮಾಹಿತಿ ನೀಡಿದರು. ಜನತಾ ನ್ಯಾಯಾಲಯದ ಕಾಯಂ ಸದಸ್ಯ ಭಾರತಿ ವಾಲ್ವೇಕಾರ್ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಎನ್‌ಎಸ್‌ಎಸ್ ಪಾತ್ರ ಮತ್ತು ತಮ್ಮ ವಿದ್ಯಾರ್ಥಿ ಜೀವನದ ಎನ್‌ಎಸ್‌ಎಸ್ ಶಿಬಿರದ ಅನುಭವವನ್ನು ಹಂಚಿಕೊಂಡರು.ಉಪ ಪ್ರಾಂಶುಪಾಲ ಡಾ.ಪ್ರಶಾಂತ ಜಾದರ್, ಡಾ.ಸಿದ್ದಿ ಪ್ರಭು ದೇಸಾಯಿ, ಪಿಡಿಒ ಚಿದಾನಂದ ಜಂಬಗಿ, ದೇವಸ್ಥಾನ ಕಮಿಟಿ ಚೇರಮನ್ ಮುಕುಂದ ತರಲೆ, ಯುಜಿ ಹಾಗೂ ಪಿಜಿ ವಿದ್ಯಾರ್ಥಿಗಳು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕು.ಭೂಮಿಕಾ, ಕು.ಯೋಗ್ಯ ಶೆಟ್ಟಿ ಮತ್ತು ಕು.ನಿಖಿಲ್ ಹೂಲಿ ಕಾರ್ಯಕ್ರಮದ ನಿರೂಪಿಸಿದರು.