ಕನಕಪುರ: ವಿದ್ಯಾರ್ಥಿಗಳಲ್ಲಿ ಗ್ರಾಮೀಣಾಭಿವೃದ್ಧಿ, ಸಾಮಾಜಿಕ ಜಾಗೃತಿ, ಪರಿಸರ ಸಂರಕ್ಷಣೆ ಹಾಗೂ ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ ರಾಷ್ಟ್ರೀಯ ಸೇವಾ ಶಿಬಿರಗಳನ್ನು ಆಯೋಜಿಸಲಾಗುತ್ತದೆ ಎಂದು ಡಾ.ನಂದೀಶ್ ಹೇಳಿದರು. ತಾಲೂಕಿನ ಕೋಡಿಹಳ್ಳಿ ಹೋಬಳಿಯ ಅರಳಿಮರದದೊಡ್ಡಿ ಗ್ರಾಮದಲ್ಲಿ ರೂರಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಆಯೋಜಿಸಿದ್ದ ಏಳು ದಿನಗಳ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಬಿರದಲ್ಲಿ ಗ್ರಾಮದ ಸಾರ್ವಜನಿಕ ಸ್ಥಳಗಳು, ರಸ್ತೆ ಬದಿ ಹಾಗೂ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಿ ಪರಿಸರ ಸಂರಕ್ಷಣೆಯ ಮಹತ್ವ ತಿಳಿಸುವ ಉದ್ದೇಶದಿಂದ ಸಸಿಗಳನ್ನು ನೆಡಲಾಗಿದೆ. ಗ್ರಾಮದ ಬಸ್ ನಿಲ್ದಾಣವನ್ನು ಪುನಶ್ಚೇತನಗೊಳಿಸುವ ಕಾರ್ಯ ಕೈಗೊಂಡು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿ ಬಣ್ಣ ಬಳಿದು ಸುಂದರಗೊಳಿಸಲಾಗಿದೆ ಎಂದು ಹೇಳಿದರು.
ಕೈಷಿ ತಜ್ಞರಿಂದ ರೈತರಿಗೆ ಆಧುನಿಕ ಕೃಷಿ ವಿಧಾನಗಳು, ಸಾವಯವ ಕೃಷಿ ಮಹತ್ವ, ನೀರಿನ ಸಮರ್ಪಕ ಬಳಕೆ ಹಾಗೂ ಬೆಳೆಗಳ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಲಾಗಿದೆ. ಗ್ರಾಮಸ್ಥರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನಡೆಸಿದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ವೈದ್ಯರು ಸಲಹೆಗಳನ್ನು ನೀಡಿ ಸ್ವಚ್ಛತೆ, ಪೌಷ್ಟಿಕ ಆಹಾರ ಹಾಗೂ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳು ಮನೆ ಮನೆಗೆ ತೆರಳಿ ಜನರಲ್ಲಿ ಸ್ವಚ್ಛತೆ, ಶಿಕ್ಷಣ ಹಾಗೂ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಿದರು.ಸಂಸ್ಥೆ ಅಧ್ಯಕ್ಷ ಹೆಚ್.ಕೆ.ಶ್ರೀಕಂಠ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಕೊಂಡರೆ ಸಮಾಜದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರೂರಲ್ ಕಾಲೇಜು ಪ್ರಾಂಶುಪಾಲ ಡಾ. ಎಂ.ಎಸ್. ಕೆಂಪೇಗೌಡ, ಉಪ ಪ್ರಾಂಶುಪಾಲ ಡಾ. ಎ.ಹೆಚ್.ಅಪ್ಪಾಜಿ, ಶಿಬಿರಾಧಿಕಾರಿ ಡಾ. ಭೋಜರಾಜ್, ಗ್ರಾಪಂ ಸದಸ್ಯರು ಹಾಗೂ ಗ್ರಾಮ ಮುಖಂಡರಾದ ಕೃಷ್ಣಪ್ಪ, ವೆಂಕಟೇಶ್, ಮುನಿಯಪ್ಪ, ರಾಜು, ವೆಂಕಟರಾಮು, ಮಂಜುಳಾದೇವಿ, ಮಧು, ಉಪನ್ಯಾಸಕರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.ಕೆ ಕೆ ಪಿ ಸುದ್ದಿ 02:
ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಅರಳಿಮರದದೊಡ್ಡಿ ಗ್ರಾಮದಲ್ಲಿ ರೂರಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಆಯೋಜಿಸಿದ್ದ ಏಳು ದಿನಗಳ ವಿಶೇಷ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.