ಸಮರ್ಥ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಒಂದು ವೇದಿಕೆ ಎಂದು ತೆಂಕನಿಡಿಯೂರು ಸರ್ಕಾರಿ ಕಾಲೇಜಿನ ಎನ್. ಎಸ್. ಎಸ್ ಅಧಿಕಾರಿ ಬಾಲರಾಜ ಹೇಳಿದರು.
ಉಡುಪಿ: ಸಮರ್ಥ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಒಂದು ವೇದಿಕೆ ಎಂದು ತೆಂಕನಿಡಿಯೂರು ಸರ್ಕಾರಿ ಕಾಲೇಜಿನ ಎನ್. ಎಸ್. ಎಸ್ ಅಧಿಕಾರಿ ಬಾಲರಾಜ ಹೇಳಿದರು.
ಪೂರ್ಣಪ್ರಜ್ಞ ಕಾಲೇಜಿನಲ್ಲಿ ಮಂಗಳೂರು ಮತ್ತು ಉಡುಪಿ ವಲಯದ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳ ಪ್ರತಿಭಾ ಉತ್ಸವದಲ್ಲಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮು ಎಲ್. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಮಕ್ಕಳ ಪ್ರತಿಭೆಯನ್ನು ಹೊರಹಾಕಲು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು. ಸಭೆಯ ಅಧ್ಯಕ್ಷತೆಯನ್ನು ಪೂರ್ಣಪ್ರಜ್ಞ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಸಿಎ ಪ್ರಶಾಂತ್ ಹೊಳ್ಳ ವಹಿಸಿದ್ದು, ರಾಷ್ಟ್ರೀಯ ಸೇವಾ ಯೋಜನೆಯ ಸೇವೆ ಸಮಾಜಕ್ಕೆ ನಿಜಕ್ಕೂ ಆದರ್ಶ ಪ್ರಾಯವಾಗಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಎನ್.ಎಸ್. ಎಸ್ ಅಧಿಕಾರಿಗಳಾದ ಡಾ. ನಾಗರಾಜ ಜಿ.ಪಿ, ಸುಪರ್ಣ, ಸಹಾಯಕ ಎನ್. ಎಸ್. ಎಸ್ ಅಧಿಕಾರಿಗಳಾದ ಡಾ. ವಿನೋದ್ ಕುಮಾರ್, ಸ್ವಾತಿ, ವಿದ್ಯಾರ್ಥಿ ನಾಯಕರಾದ ದೀಪ್ತಿ, ಶ್ರೀತೇಶ್ ಉಪಸ್ಥಿತರಿದ್ದರು.