ದೇಶದ ಅಭಿವೃದ್ಧಿಯಲ್ಲಿ ಎನ್‌ಎಸ್‌ಎಸ್ ಪಾತ್ರ ದೊಡ್ಡದು: ಪ್ರೊ.ಕೆ.ಎಂ.ನಾಗರಾಜು

| Published : May 21 2024, 12:38 AM IST

ದೇಶದ ಅಭಿವೃದ್ಧಿಯಲ್ಲಿ ಎನ್‌ಎಸ್‌ಎಸ್ ಪಾತ್ರ ದೊಡ್ಡದು: ಪ್ರೊ.ಕೆ.ಎಂ.ನಾಗರಾಜು
Share this Article
  • FB
  • TW
  • Linkdin
  • Email

ಸಾರಾಂಶ

ಧೈರ್ಯ, ವಿಶ್ವಾಸ ಹಾಗೂ ಮನೋ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.ಎನ್‌ಎಸ್‌ಎಸ್ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಗ್ರಾಮೀಣ ಬದುಕಿನ ಜನರ ಜೀವನಶೈಲಿ, ಗ್ರಾಮೀಣ ಕ್ರೀಡೆ, ಕಲೆ ಪ್ರಕಾರಗಳ ಬಗ್ಗೆ ಪರಿಚಯ ಆಗುತ್ತದೆ. ಕಾಲೇಜು ಅವಧಿಯಲ್ಲಿ ವಿದ್ಯಾಭ್ಯಾಸದ ಜತೆಯಲ್ಲಿ ವಿದ್ಯಾರ್ಥಿಗಳು ಎನ್‌ಎಸ್‌ಎಸ್‌ನಲ್ಲಿ ತೊಡಗಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಎನ್‌ಎಸ್‌ಎಸ್ ಮಹತ್ತರ ಪಾತ್ರ ವಹಿಸುತ್ತದೆ ಎಂದು ರಾಜ್ಯ ಎನ್‌ಎಸ್‌ಎಸ್ ಪ್ರಶಸ್ತಿ ಪುರಸ್ಕೃತ, ಎಟಿಎನ್‌ಸಿ ಕಾಲೇಜಿನ ಪ್ರೊ. ಕೆ.ಎಂ.ನಾಗರಾಜು ಹೇಳಿದರು.

ರಾಜೇಂದ್ರ ನಗರದಲ್ಲಿರುವ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಎನ್‌ಎಸ್‌ಎಸ್‌ನಲ್ಲಿ ಪಾಲ್ಗೊಳ್ಳುವುದರಿಂದ ಧೈರ್ಯ, ವಿಶ್ವಾಸ ಹಾಗೂ ಮನೋ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಎನ್‌ಎಸ್‌ಎಸ್ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಗ್ರಾಮೀಣ ಬದುಕಿನ ಜನರ ಜೀವನಶೈಲಿ, ಗ್ರಾಮೀಣ ಕ್ರೀಡೆ, ಕಲೆ ಪ್ರಕಾರಗಳ ಬಗ್ಗೆ ಪರಿಚಯ ಆಗುತ್ತದೆ. ಕಾಲೇಜು ಅವಧಿಯಲ್ಲಿ ವಿದ್ಯಾಭ್ಯಾಸದ ಜತೆಯಲ್ಲಿ ವಿದ್ಯಾರ್ಥಿಗಳು ಎನ್‌ಎಸ್‌ಎಸ್‌ನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ದೇಶದ ಅಭಿವೃದ್ಧಿಯಲ್ಲಿ ಎನ್‌ಎಸ್‌ಎಸ್ ಪಾತ್ರ ತುಂಬಾ ದೊಡ್ಡದು. ಎನ್‌ಎಸ್‌ಎಸ್ ಶಿಬಿರ ನಡೆಯುತ್ತಿರುವ ಗ್ರಾಮಾಂತರ ಪ್ರದೇಶದಲ್ಲಿ ಸ್ಥಳೀಯರು ಕೈಜೋಡಿಸಿ ಸಹಕಾರ ನೀಡಬೇಕು. ಸಂಘ ಸಂಸ್ಥೆಗಳ ಸಹಕಾರವು ಉತ್ತಮ ಸೇವೆ ಸಲ್ಲಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ಸಮಿತಿಯು ವಿದ್ಯಾಭ್ಯಾಸದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡಿಕೊಂಡು ಬರುತ್ತಿದೆ. ಎನ್‌ಎಸ್‌ಎಸ್‌ನಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸ್ಥಾನ ತಲುಪಿ ಸಮಾಜದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ನಿವೃತ್ತ ಅಧಿಕಾರಿ ಚಂದ್ರಶೇಖರಯ್ಯ, ಡಾ. ಪರಮೇಶ್ವರ ಶಿಗ್ಗಾವ್, ಅರುಣ್ ದೀಕ್ಷಿತ್, ನಿವೃತ್ತ ಪ್ರಾಚಾರ್ಯ ಡಾ.ಧನಂಜಯ, ಪ್ರದೀಪ್ ಎಲಿ, ಕೇಶವಪ್ಪ, ಸಂತೋಷ್, ಕಾರ್ಯದರ್ಶಿ ಕಿಶೋರ್ ಕುಮಾರ್, ಗಣೇಶ್ ಎಂ.ಅಂಗಡಿ ಉಪಸ್ಥಿತರಿದ್ದರು.